ಕೋಚ್ ಆನಿಲ್ ಕುಂಬ್ಳೆ ಹಾಗೂ ನಾಯಕ ವಿರಾಟ್ ಕೊಹ್ಲಿ ಸಂಬಂಧ ಹಳಸಿದೆ, ಅವರಿಬ್ಬರು ಪರಸ್ಪರ ಮುಖ ಕೂಡ ನೋಡಿಕೊಳ್ಳುವುದಿಲ್ಲ ಎಂಬ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ ವಿರಾಟ್ ಕೊಹ್ಲಿ, ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ-ಪಾಕಿಸ್ತಾನದ ವಿರುದ್ಧ ಆರಂಭಿಕ ಪಂದ್ಯವಾಡುತ್ತಿರುವ ಹಿನ್ನೆಲೆಯಲ್ಲಿ ಈ ರೀತಿ ವದಂತಿಗಳನ್ನು ಹಬ್ಬಿಸಲಾಗುತ್ತಿದೆ ಎಂದು ಹೇಳಿದ್ದಾರೆ.