ಚಾಂಪಿಯನ್ಸ್‌ ಟ್ರೋಫಿ: ಭಾರತ–ಪಾಕ್ ಹೈವೋಲ್ಟೇಜ್ ಪಂದ್ಯಕ್ಕೆ ಮತ್ತೆ ಮಳೆ ಅಡ್ಡಿ, 2 ಒವರ್ ಕಡಿತ

ಭಾರತ-ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯ ಮಳೆಯಿಂದಾಗಿ ಮತ್ತೆ ಸ್ಥಗಿತಗೊಂಡಿಗಿದ್ದು, ಪಂದ್ಯವನ್ನು 48 ಒವರ್ ಗಳಿಗೆ...
ರೋಹಿತ್ ಶರ್ಮಾ, ಶಿಖರ್ ಧವನ್
ರೋಹಿತ್ ಶರ್ಮಾ, ಶಿಖರ್ ಧವನ್
ಬರ್ಮಿಂಗ್ ಹ್ಯಾಮ್: ಭಾರತ-ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯ ಮಳೆಯಿಂದಾಗಿ ಮತ್ತೆ ಸ್ಥಗಿತಗೊಂಡಿಗಿದ್ದು, ಪಂದ್ಯವನ್ನು 48 ಒವರ್ ಗಳಿಗೆ ಸೀಮಿತಗೊಳಿಸಲಾಗಿದೆ.
ಇಂದು ಎಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಟಾಸ್‌ ಗೆದ್ದ ಪಾಕಿಸ್ತಾನ ಫೀಲ್ಡಿಂಗ್‌ ಆಯ್ದುಕೊಂಡಿದ್ದು, ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 1 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿದೆ.
ಮೊದಲ ಬ್ಯಾಟ್ ಮಾಡಿದ ಭಾರತ ಉತ್ತಮ ಆರಂಭ ಪಡೆಯಿತಾದರು ಪಂದ್ಯಕ್ಕೆ ಮಳೆ ಅಡ್ಡಿಪಡಿಸಿತು. 9.5 ಒವರ್‌ನಲ್ಲಿ ಮಳೆ ಆರಂಭವಾಯಿತು. ಹೀಗಾಗಿ ಪಂದ್ಯವನ್ನು ಅರ್ಧ ಗಂಟೆ ನಿಲ್ಲಿಸಲಾಗಿತ್ತು. ಮಳೆರಾಯ ಬಿಡುವು ನೀಡಿದ್ದರಿಂದ ಮತ್ತೆ ಆರಂಭಿಸಲಾಗಿತ್ತು. ಇದೀಗ ಮತ್ತೆ ಮಳೆ ಬರುತ್ತಿದ್ದು, ಪಂದ್ಯ ಸ್ಥಗಿತಗೊಳಿಸಲಾಗಿದೆ.
ಆರಂಭಿಕ ಆಟಗಾರ ರೋಹಿತ್ ಶರ್ಮಾ 77 ರನ್ ಗಳಿಸಿದ್ದು, ಶಿಖರ್ ಧವನ್ 68 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ. ಪ್ರಸ್ತೂತ ರೋಹಿತ್ ಶರ್ಮಾ ಹಾಗೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕ್ರೀಸ್ ನಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com