ಭಾರತ-ಪಾಕ್ ನಡುವೆ ಹೈ ವೋಲ್ಟೇಜ್ ಪಂದ್ಯ: ಟಾಸ್ ಗೆದ್ದ ಪಾಕಿಸ್ತಾನದಿಂದ ಫೀಲ್ಡಿಂಗ್ ಆಯ್ಕೆ

ಬರ್ಮಿಂಗ್ ಹ್ಯಾಮ್ ನಲ್ಲಿ ಭಾರತ-ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಾರಂಭವಾಗಲಿದ್ದು, ಟಾಸ್ ಗೆದ್ದಿರುವ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಭಾರತ-ಪಾಕಿಸ್ತಾನ ಪಂದ್ಯ
ಭಾರತ-ಪಾಕಿಸ್ತಾನ ಪಂದ್ಯ
ಬರ್ಮಿಂಗ್ ಹ್ಯಾಮ್: ಬರ್ಮಿಂಗ್ ಹ್ಯಾಮ್ ನಲ್ಲಿ ಭಾರತ-ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಾರಂಭವಾಗಲಿದ್ದು, ಟಾಸ್ ಗೆದ್ದಿರುವ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. 
ಭಾರತ ತಂಡ ಮೊದಲು ಬ್ಯಾಟ್ ಮಾಡಲಿದ್ದು, ಬದ್ಧ ವೈರಿಗಳ ನಡುವಿನ ಪಂದ್ಯ ತೀವ್ರ ಕುತೂಹಲ ಮೂಡಿಸಿದೆ. ಬಹುನಿರೀಕ್ಷಿತ ಪಂದ್ಯಕ್ಕೆ ಬರ್ಮಿಂಗ್ ಹ್ಯಾಮ್ ನ ಎಜ್ ಬಾಸ್ಟನ್ ಕ್ರೀಡಾಂಗಣ ಸಕಲ ರೀತಿಯಲ್ಲಿ ಸಜ್ಜಾಗಿದ್ದು, ಭಾರತದ ದಿಗ್ಗಜ ಬ್ಯಾಟಿಂಗ್ ಪಡೆ ಹಾಗೂ ಪಾಕಿಸ್ತಾನದ ಅತ್ಯುತ್ತಮ ಬೌಲಿಂಗ್ ಪಡೆ ಎದುರಿನ ಪೈಪೋಟಿಗೆ ಸಾಕ್ಷಿಯಾಗಲು ಕೋಟ್ಯಾಂತರ ಕ್ರಿಕೆಟ್ ಅಭಿಮಾನಿಗಳು ಕಾತರಿಸುತ್ತಿದ್ದಾರೆ. 
ಪ್ರಮುಖವಾಗಿ ವಿಶ್ವದ ಶ್ರೇಷ್ಠ ಬ್ಯಾಟ್ಸ್ ಮನ್ ಗಳಲ್ಲಿ ಒಬ್ಬರೆನಿಸಿರುವ ವಿರಾಟ್ ಕೊಹ್ಲಿ ಹಾಗೂ ಪ್ರತಿಭಾವಂತ ವೇಗಿ ಮೊಹಮ್ಮದ್ ಅಮೀರ್ ನಡುವಿನ ಕಾಳಗ ಎಲ್ಲರ ಕುತೂಹಲವನ್ನು ಕೆರಳಿಸಿದೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com