ಬರ್ಮಿಂಗ್ ಹ್ಯಾಮ್ ನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಅಕ್ಷರಶಃ ಸ್ಫೋಟಕ ಆಟವಾಡಿದ ಯುವಿ ಕೇವಲ 29 ಎಸೆತಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯಲ್ಲಿ ಅತೀ ಕಡಿಮೆ ಎಸೆತದಲ್ಲಿ ಅರ್ಧಶತಕ ಸಿಡಿಸಿದ ಭಾರತೀಯ ಆಟಗಾರ ಎಂಬ ಕೀರ್ತಿಗೆ ಯುವಿ ಭಾಜನರಾಗಿದ್ದಾರೆ. ಅಂತೆಯೇ ಪಾಕಿಸ್ತಾನದ ವಿರುದ್ಧ ಭಾರತೀಯ ಆಟಗಾರ ಸಿಡಿಸಿದ ವೇಗದ ಅರ್ಧಶತಕ ಎಂಬ ದಾಖಲೆಗೂ ಯುವಿ ಅರ್ಧಶತಕ ಭಾಜನವಾಗಿದೆ.