ಆಸ್ಟ್ರೇಲಿಯಾ ಕ್ರಿಕೆಟ್ ತಂಡ
ಕ್ರಿಕೆಟ್
ಪ್ರತಿಷ್ಠಿತ ಆ್ಯಷಸ್ ಸರಣಿಗೆ ಆಸ್ಟ್ರೇಲಿಯಾ ಕ್ರಿಕೆಟಿಗರ ಬಹಿಷ್ಕಾರ?
ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ನೂತನ ವೇತನ ಪರಿಷ್ಕರಣೆಗೆ ತಂಡದ ಉಪನಾಯಕ ಡೇವಿಡ್ ವಾರ್ನರ್ ವಿರೋಧ ಮುಂದುವರಿಸಿದ್ದಾರೆ...
ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ನೂತನ ವೇತನ ಪರಿಷ್ಕರಣೆಗೆ ತಂಡದ ಉಪನಾಯಕ ಡೇವಿಡ್ ವಾರ್ನರ್ ವಿರೋಧ ಮುಂದುವರಿಸಿದ್ದಾರೆ.
ಕಳೆದ ತಿಂಗಳು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಯನ್ನು ಟೀಕಿಸಿದ್ದ ಡೇವಿಡ್ ವಾರ್ನರ್ ಮಂಡಳಿಯ ವರ್ತನೆ ಇದೇ ರೀತಿ ಮುಂದುವರಿದರೆ ಪ್ರತಿಷ್ಠಿತ ಆ್ಯಷಸ್ ಟೆಸ್ಟ್ ಸರಣಿಗೆ ಮುಖ್ಯ ಆಟಗಾರರು ಗೈರಾಗುವ ಸಾಧ್ಯತೆಯಿದೆ ಎಂದಿದ್ದರು.
ಇದೀಗ ವಾರ್ನರ್ ಮತ್ತೆ ತಮ್ಮ ಅದೇ ಮಾತನ್ನು ಪುನರುಚ್ಛರಿಸಿದ್ದಾರೆ. ನೂತನ ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಜೂನ್ 30ರ ನಂತರ ವೇತನ ನೀಡುವುದಿಲ್ಲ ಎನ್ನುವ ಕ್ರಿಕೆಟ್ ಆಸ್ಟ್ರೇಲಿಯಾ ಎಚ್ಚರಿಕೆಗೆ ವಾರ್ನರ್ ಒಪ್ಪಂದಕ್ಕೆ ಸಹಿ ಹಾಕದಿದ್ದರೆ ನಾವು ನಿರುದ್ಯೋಗಿಗಳಾಗುತ್ತೇವೆ. ನಾವು ಕ್ರಿಕೆಟ್ ಆಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ