ಚಾಂಪಿಯನ್ಸ್ ಟ್ರೋಫಿ ಮುಕ್ತಾಯದೊಂದಿಗೆ ಅನಿಲ್ ಕುಂಬ್ಳೆ ಅವರ ಕೋಚ್ ಗುತ್ತಿಗೆ ಮುಕ್ತಾಯಗೊಳ್ಳಲಿದ್ದು ಈ ಹಿನ್ನೆಲೆಯಲ್ಲಿ ಬಿಸಿಸಿಐ ಸಹ ಅರ್ಜಿಗಳನ್ನು ಆಹ್ವಾನಿಸಿದೆ. ಇನ್ನು ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್, ಟಾಮ್ ಮೂಡಿ, ರಿಚರ್ಡ್ ಪೇಬಸ್, ಲಾಲ್ ಚಂದ್ ರಾಜಪೂತ್ ಮತ್ತು ದೊಡ್ಡ ಗಣೇಶ್ ಅವರು ಅರ್ಜಿಗಳನ್ನು ಸಲ್ಲಿಸಿದ್ದಾರೆ.