ಐಸಿಸಿ ಚಾಂಪಿಯನ್ಸ್ ಟ್ರೋಫಿ: ದಾಖಲೆ ಬರೆದ ಶಿಖರ್ ಧವನ್-ರೋಹಿತ್ ಶರ್ಮಾ ಜೋಡಿ
ಐಸಿಸಿ ಚಾಂಪಿಯನ್ಸ್ ಟ್ರೋಫಿ 2017ರಲ್ಲಿ ಶ್ರೀಲಂಕಾ ವಿರುದ್ಧ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರರಾದ ಶಿಖರ್ ಧವನ್ ಹಾಗೂ ರೋಹಿತ್ ಶರ್ಮಾ ಜೋಡಿ ನೂತನ ವಿಶ್ವದಾಖಲೆಯೊಂದನ್ನು ನಿರ್ಮಿಸಿದೆ.
ಲಂಡನ್: ಐಸಿಸಿ ಚಾಂಪಿಯನ್ಸ್ ಟ್ರೋಫಿ 2017ರಲ್ಲಿ ಶ್ರೀಲಂಕಾ ವಿರುದ್ಧ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರರಾದ ಶಿಖರ್ ಧವನ್ ಹಾಗೂ ರೋಹಿತ್ ಶರ್ಮಾ ಜೋಡಿ ನೂತನ ವಿಶ್ವದಾಖಲೆಯೊಂದನ್ನು ನಿರ್ಮಿಸಿದೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಜೋಡಿ ಅತ್ಯಂತ ಯಶಸ್ವೀ ಆರಂಭಿಕ ಜೋಡಿ ಎಂಬ ದಾಖಲೆ ಬರೆದಿದ್ದಾರೆ. ಆರಂಭಿಕರಾಗಿ ಒಟ್ಟು 7 ಇನ್ನಿಂಗ್ಸ್ ಗಳಲ್ಲಿ ಕಣಕ್ಕಿಳಿದಿರುವ ಈ ಜೋಡಿ ಒಟ್ಟು 636 ರನ್ ಗಳನ್ನು ಕಲೆಹಾಕಿದ್ದು, ಸತತವಾಗಿ ಶತಕದ ಜೊತೆಯಾಟ ಸಾಧಿಸಿ ಹೊಸ ಭಾರತೀಯ ದಾಖಲೆ ಬರೆದಿದ್ದಾರೆ. ಆಸ್ಟ್ರೇಲಿಯಾ, ಪಾಕಿಸ್ತಾನ ಹಾಗೂ ಶ್ರೀಲಂಕಾ ವಿರುದ್ಧ ಸತತವಾಗಿ ಮೂರು ಬಾರಿ ಶತಕದ ಜೊತೆಯಾಟ ಆಡಿರುವ ಈ ಜೋಡಿ ವಿಶ್ವದ ಅತ್ಯಂತ ಯಶಸ್ವೀ ಜೋಡಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಆ ಮೂಲಕ ಅತ್ಯಂತ ಯಶಸ್ವೀ ಜೋಡಿ ಎಂಬ ಕೀರ್ತಿಗೆ ಭಾಜನರಾಗಿದ್ದ ವೆಸ್ಟ್ ಇಂಡೀಸ್ ನ ಕ್ರಿಸ್ ಗೇಯ್ಲ್ ಮತ್ತು ಶಿವನಾರಾಯಣ್ ಚಂದ್ರಪಾಲ್ ಅವರ ದಾಖಲೆಯನ್ನು ಶರ್ಮಾ-ಧವನ್ ಜೋಡಿ ಹಿಂದಿಕ್ಕಿದೆ.
ಬಲಗೈ ಬ್ಯಾಟ್ಸ್ ಮನ್ ರೋಹಿತ್ ಶರ್ಮ, ಎಡಗೈ ಬ್ಯಾಟ್ಸ್ ಮನ್ ಶಿಖರ್ ಧವನ್ ಅವರು ಆಸ್ಟ್ರೇಲಿಯಾ ವಿರುದ್ಧ ಸಿಡ್ನಿಯಲ್ಲಿ 123ರನ್ ಜೊತೆಯಾಟ, ಬರ್ಮಿಂಗ್ ಹ್ಯಾಮ್ ನಲ್ಲಿ ಪಾಕಿಸ್ತಾನ ವಿರುದ್ಧ 136ರನ್ ಹಾಗೂ ಒವಲ್ ನಲ್ಲಿ ಶ್ರೀಲಂಕಾ ವಿರುದ್ಧ ಇಂದು 138ರನ್ ಜೊತೆಯಾಟ ಸಾಧಿಸಿ, ಹೊಸ ದಾಖಲೆ ಬರೆದಿದ್ದಾರೆ.