ನೀನು ಧರಿಸಿರುವ ಜಾಕೆಟ್ ನನ್ನದೆಂದು ನೆಹ್ರಾ ಕಾಲೆಳೆದ ಯುವರಾಜ್ ಸಿಂಗ್!

ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಪಾಕಿಸ್ತಾನ ವಿರುದ್ಧ ಗೆಲುವಿನ ಹುಮ್ಮಸ್ಸಿನಲ್ಲಿರುವ ಸ್ಫೋಟಕ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಶ್ರೀಲಂಕಾ ವಿರುದ್ಧದ ಪಂದ್ಯಕ್ಕೂ...
ಯುವರಾಜ್ ಸಿಂಗ್, ಆಶಿಶ್ ನೆಹ್ರಾ
ಯುವರಾಜ್ ಸಿಂಗ್, ಆಶಿಶ್ ನೆಹ್ರಾ
ಲಂಡನ್: ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಪಾಕಿಸ್ತಾನ ವಿರುದ್ಧ ಗೆಲುವಿನ ಹುಮ್ಮಸ್ಸಿನಲ್ಲಿರುವ ಸ್ಫೋಟಕ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಶ್ರೀಲಂಕಾ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ನ ನೆನಪುಗಳಿಗೆ ಜಾರಿದ್ದಾರೆ. 
ಯುವರಾಜ್ ಸಿಂಗ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಸ್ನೇಹಿತರಾದ ವೇಗಿ ಆಶಿಶ್ ನೆಹ್ರಾ ಜತೆ ತೆಗೆಸಿಕೊಂಡಿರುವ ಫೋಟೋವೊಂದನ್ನು ಹಾಕಿ ಮಿಸ್ಟರ್ ಆಶಿಶ್ ನೀನು ಧರಿಸಿರುವ ಜಾಕೆಟ್ ನನ್ನದು ಎಂದು ಬರೆದಿದ್ದಾರೆ. 
ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಬಿ ಗುಂಪಿನ 8ನೇ ಲೀಗ್ ಪಂದ್ಯ ಟೀಂ ಇಂಡಿಯಾ ಹಾಗೂ ಶ್ರೀಲಂಕಾ ನಡುವೆ ಪಂದ್ಯ ನಡೆಯಲಿದೆ. ಇನ್ನು ಪಂದ್ಯ ಲಂಡನ್ ನ ಓವಲ್ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನ ಪ್ರಕಾರ 3.30ಕ್ಕೆ ಪ್ರಾರಂಭವಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com