ಲಂಡನ್: ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಭಾರತ-ಆಫ್ರಿಕಾ ನಡುವಿನ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ ಆಫ್ರಿಕಾ ತಂಡವನ್ನು 8 ವಿಕೆಟ್ ಗಳಿಂದ ಮಣಿಸಿ ಸೆಮಿಫೈನಲ್ ಪ್ರವೇಶಿಸಿದೆ.
ಲಂಡನ್ ನ ದಿ ಓವಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಇದರೊಂದಿಗೆ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 44.3 ಓವರ್ ಗಳಲ್ಲಿ 191 ರನ್ ಗಳಿಗೆ ಸರ್ವಪತನ ಕಂಡಿತು. ಆಫ್ರಿಕಾ ನೀಡಿದ 192 ರನ್ ಗಳ ಸಾಧಾರಣ ಮೊತ್ತ ಬೆನ್ನಟ್ಟಿದ ಟೀಂ ಇಂಡಿಯಾ 38 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 193 ರನ್ ಗಳನ್ನು ಸಿಡಿಸುವ ಮೂಲಕ ಗೆಲುವಿನ ನಗೆ ಬೀರಿತು.
ದಕ್ಷಿಣ ಆಫ್ರಿಕಾ ತಂಡದ ಆರಂಭಿಕರಾದ ಡಿ ಕಾಕ್ 53, ಹಾಶೀಂ ಆಮ್ಲಾ 35, ಡುಪ್ಲೇಸಿಸ್ 36, ಎಬಿಡಿ ವಿಲಿಯರ್ಸ್ 16, ಜೆಪಿ ಡುಮಿನಿ 20 ರನ್ ಗಳಿಸಿದ್ದಾರೆ.
ಟೀಂ ಇಂಡಿಯಾ ಪರ ಭುವನೇಶ್ವರ್ ಕುಮಾರ್ ಮತ್ತು ಬುಮ್ರಾ ತಲಾ 2 ವಿಕೆಟ್, ಅಶ್ವಿನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ತಲಾ 1 ವಿಕೆಟ್ ಪಡೆದಿದ್ದಾರೆ.
ಭಾರತ ಪರ ರೋಹಿತ್ ಶರ್ಮಾ 12, ಶಿಖರ್ ಧವನ್ 78, ವಿರಾಟ್ ಕೊಹ್ಲಿ ಅಜೇಯ 76 ರನ್ ಮತ್ತು ಯುವರಾಜ್ ಸಿಂಗ್ ಅಜೇಯ 23 ರನ್ ಗಳಿಸಿದ್ದಾರೆ.