ಲಂಡನ್: ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡದ ವಿರುದ್ಧ ತಿರುಗಿ ಬಿದ್ದು, ಭರ್ಜರಿ ಆಟವಾಡಿದ್ದ ಭಾರತದ ಹಾರ್ದಿಕ್ ಪಾಂಡ್ಯಾ ದಾಖಲೆಯೊಂದನ್ನು ಬರೆದಿದ್ದು, ಏಕದಿನ ಕ್ರಿಕೆಟ್ ನಲ್ಲಿ ವೇಗದ ಅರ್ಧಶತಕ ಸಿಡಿಸಿದ್ದಾರೆ.
ನಿನ್ನೆ ಲಂಡನ್ ಓವಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯಾ 43 ಎಸೆತಗಳಲ್ಲಿ 76 ರನ್ ಸಿಡಿಸಿದ್ದರು. ಅವರ ಈ ಭರ್ಜರಿ ಆಟದಲ್ಲಿ ಆರು ಸಿಕ್ಸರ್ ಹಾಗೂ 4 ಬೌಂಡರಿ ಸಿಡಿಸಿದ್ದರು. ಈ ಮೂಲಕ ವೇಗದ ಅರ್ಧಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ. ಇದಕ್ಕೂ ಮೊದಲು ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಆಡಂ ಗಿಲ್ ಕ್ರಿಸ್ಟ್ ಹೆಸರಲ್ಲಿ ಈ ದಾಖಲೆ ಇತ್ತು. 1999ರ ವಿಶ್ವಕಪ್ ಟೂರ್ನಿಯಲ್ಲಿ ಗಿಲ್ ಕ್ರಿಸ್ಟ್ 33 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು. ಆದರೆ ನಿನ್ನೆ ಪಾಂಡ್ಯಾ ಕೇವಲ 32 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಗಿಲ್ ಕ್ರಿಸ್ಟ್ ದಾಖಲೆಯನ್ನು ಮುರಿದಿದ್ದಾರೆ.
ಇನ್ನು ನಿನ್ನೆ ಫೈನಲ್ ಪಂದ್ಯದಲ್ಲಿ ಭಾರತ ಪಾಕಿಸ್ತಾನದ ವಿರುದ್ಧ 180 ರನ್ ಗಳ ಅಂತರದ ಹೀನಾಯ ಸೋಲು ಕಂಡಿತ್ತು. ಪಾಕಿಸ್ತಾನ ನೀಡಿದ್ದ 339 ರನ್ ಗಳ ಗುರಿ ನೀಡಿತ್ತು. ಇದಕ್ಕೆ ಉತ್ತರವಾಗಿ ಭಾರತ ತಂಡ ಕೇವಲ 158 ರನ್ ಗಳಿಗೆ ಆಲ್ ಔಟ್ ಆಗಿತ್ತು.
Advertisement