ಸೋಲಿನ ನಡುವೆಯೂ ವಿಶೇಷ ದಾಖಲೆ ಬರೆದ ಯುವರಾಜ್ ಸಿಂಗ್!

ಲಂಡನ್ ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪೈನಲ್ ಪಂದ್ಯದಲ್ಲಿ ಭಾರತದ ಹೀನಾಯ ಸೋಲಿನ ನಡುವೆಯೂ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸಮನ್ ಯುವರಾಜ್ ಸಿಂಗ್ ವಿಶಿಷ್ಠ ದಾಖಲೆಯೊಂದಕ್ಕೆ ಸಾಕ್ಷಿಯಾಗಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಲಂಡನ್: ಲಂಡನ್ ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪೈನಲ್ ಪಂದ್ಯದಲ್ಲಿ ಭಾರತದ ಹೀನಾಯ ಸೋಲಿನ ನಡುವೆಯೂ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸಮನ್ ಯುವರಾಜ್ ಸಿಂಗ್ ವಿಶಿಷ್ಠ ದಾಖಲೆಯೊಂದಕ್ಕೆ ಸಾಕ್ಷಿಯಾಗಿದ್ದಾರೆ.

ಐಸಿಸಿ ಆಯೋಜನೆಯ ಟೂರ್ನಮೆಂಟ್ ಗಳಲ್ಲಿ ಪೈಕಿ ಅತೀ ಹೆಚ್ಚು ಫೈನಲ್ ಪಂದ್ಯಗಳನ್ನಾಡಿದ ಸಾಧನೆಯನ್ನು ಯುವರಾಜ್ ಮಾಡಿದ್ದು, ಈ ವರೆಗೂ ಯುವಿ ಒಟ್ಟು 7 ಫೈನಲ್ ಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. 17  ವರ್ಷಗಳ ಹಿಂದೆ 2000ನೇ ಇಸವಿಯಲ್ಲಿ ಮೊದಲ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಾಣಿಸಿಕೊಂಡಿದ್ದ ಯುವಿ ಅದೇ ಟೂರ್ನಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಮೊದಲ ಫೈನಲ್ ಪಂದ್ಯವನ್ನಾಡಿದ್ದರು. ಬಳಿಕ 2002ರ ಚಾಂಪಿಯನ್ಸ್  ಟ್ರೋಫಿ, 2003ರ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿ, 2007ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿ, 2011ರ ವಿಶ್ವಕಪ್ ಟೂರ್ನಿ, 2014ರ ಐಸಿಸಿ ವಿಶ್ವಕಪ್ ಟೂರ್ನಿ ಮತ್ತು 2017ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ನಲ್ಲಿ  ಕಾಣಿಸಿಕೊಂಡಿದ್ದಾರೆ.

ಇದಕ್ಕೂ ಮೊದಲು ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್, ಶ್ರೀಲಂಕಾದ ಕುಮಾರ ಸಂಗಕ್ಕಾರ, ಮಹೇಲಾ ಜಯವರ್ಧನೆ, ಮುತ್ತಯ್ಯ ಮುರಳೀಧರನ್ ಅತೀ ಹೆಚ್ಚು ಫೈನಲ್ ಪಂದ್ಯವನ್ನಾಡಿದ್ದ ದಾಖಲೆ ಹೊಂದಿದ್ದರು.

ಅಂತೆಯೇ ಇದೇ ಟೂರ್ನಿಯಲ್ಲಿ ಯುವಿ ತಮ್ಮ 300ನೇ ಏಕದಿನ ಪಂದ್ಯವನ್ನೂ ಪೂರೈಸಿದರು. ಇದೀಗ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯವಾಡುವ ಮೂಲಕ ಅತಿ ಹೆಚ್ಚು ಫೈನಲ್ ಪಂದ್ಯಗಳನ್ನಾಡಿರುವ ಆಟಗಾರ  ಎನಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com