ಸದಸ್ಯ ರಾಷ್ಟ್ರಗಳ ಸ್ವಹಿತಾಸಕ್ತಿಗಾಗಿ 2018ರ ಟಿ20 ವಿಶ್ವಕಪ್ ರದ್ದು!

ಐಸಿಸಿ ಸದಸ್ಯ ರಾಷ್ಟ್ರಗಳ ಸ್ವಹಿತಾಸಕ್ತಿಯಿಂದಾಗಿ 2018ರಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ 2020ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಲಂಡನ್: ಐಸಿಸಿ ಸದಸ್ಯ ರಾಷ್ಟ್ರಗಳ ಸ್ವಹಿತಾಸಕ್ತಿಯಿಂದಾಗಿ 2018ರಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ 2020ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಐಸಿಸಿ ಮೂಲಗಳ ಪ್ರಕಾರ ಮುಂಬರುವ 2018ರಲ್ಲಿ ಟಿ20 ವಿಶ್ವಕಪ್ ಟೂರ್ನಿ ನಡೆಯಬೇಕಿತ್ತು. ಆದರೆ ಐಸಿಸಿ ಸದಸ್ಯ ರಾಷ್ಟ್ರಗಳ ನಡುವಿನ ಟೂರ್ನಿಗಳಿಗೆ ದಿನಾಂಕ ನಿಗದಿಯಾಗಿರುವುದರಿಂದ 2018ರಲ್ಲಿ ನಡೆಯಬೇಕಿದ್ದ ಐಸಿಸಿ ಟಿ20 ವಿಶ್ವಕಪ್ ಕ್ರಿಕೆಟ್ ರದ್ದು ಮಾಡಲಾಗಿದ್ದು, ಮುಂದಿನ ಟೂರ್ನಿ 2020ರಲ್ಲಿ ದಕ್ಷಿಣ ಆಫ್ರಿಕಾ ಅಥವಾ ಆಸ್ಟ್ರೇಲಿಯಾದಲ್ಲಿ ಆಯೋಜಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಈ ಹಿಂದೆ ಪ್ರತಿ ಎರಡು ವರ್ಷಗಳಿಗೊಮ್ಮೆ ಆಯೋಜನೆ ಆಗುತ್ತಿದ್ದ ಟಿ 20 ವಿಶ್ವಕಪ್ ಕ್ರಿಕೆಟ್ ಟೂರ್ನಿ 2018ರಲ್ಲಿ ಆಯೋಜನೆಯಾಗಬೇಕಿತ್ತು. ಆದರೆ ಸದಸ್ಯ ರಾಷ್ಟ್ರಗಳ ಮಧ್ಯೆ ಹಲವು ದ್ವಿಪಕ್ಷೀಯ ಸರಣಿಗಳು ನಡೆಯಲು ಈಗಾಗಲೇ ದಿನಾಂಕ ನಿಗದಿಯಾದ ಹಿನ್ನೆಲೆಯಲ್ಲಿ ಟಿ20 ವಿಶ್ವಕಪ್ ರದ್ದಾಗಿದೆ ಎಂದು ಐಸಿಸಿಯ ಉನ್ನತ ಮೂಲಗಳು ತಿಳಿಸಿವೆ. ಇದೇ ಕಾರಣಕ್ಕೆ 2020ರಲ್ಲಿ ಮುಂದಿನ ಟಿ20 ವಿಶ್ವಕಪ್ ನಡೆಯಲಿದೆ ಎಂದು ಐಸಿಸಿ ಸ್ಪಷ್ಟಪಡಿಸಿದೆ.

ಅಷ್ಟೇ ಅಲ್ಲದೇ ವಿವಿಧ ದೇಶಗಳು ತನ್ನದೇ ಆದ ಟಿ20 ಟೂರ್ನಿಗಳನ್ನು ಆಯೋಜಿಸುತ್ತಿರುವುದಿಂದ 2018ರಲ್ಲಿ ಐಸಿಸಿ ವಿಶ್ವಕಪ್ ಟೂರ್ನಿ ನಡೆಸದೇ ಇರಲು ನಿರ್ಧರಿಸಿದೆ. ದ್ವಿಪಕ್ಷೀಯ ಸರಣಿ ನಡೆದರೆ ಕ್ರಿಕೆಟ್ ಬೋರ್ಡ್ ಗಳಿಗೆ ಟಿವಿ ಹಕ್ಕುಗಳನ್ನು ಮಾರಾಟ ಮಾಡುವ ಮೂಲಕ ಹೆಚ್ಚಿನ ಆದಾಯ ಸಿಗುತ್ತದೆ. ಅದರಲ್ಲೂ ಭಾರತ ಯಾವುದಾದರೂ ದೇಶದ ಪ್ರವಾಸ ಕೈಗೊಂಡರೆ ಕ್ರಿಕೆಟ್ ಆಯೋಜನೆ ಮಾಡುವ ಬೋರ್ಡ್ ಗೆ ಟಿವಿ ಹಕ್ಕು ರೂಪದಲ್ಲಿ ಕೋಟಿಗಟ್ಟಲೇ ಹಣ ಸಿಗುತ್ತದೆ. ಇದೇ ಕಾರಣಕ್ಕೆ ಸದಸ್ಯ ರಾಷ್ಟ್ರಗಳು ತಮ್ಮ ಸ್ವಹಿತಾಸಕ್ತಿಗಾಗಿ ಟಿ20 ವಿಶ್ವಕಪ್ ಟೂರ್ನಿಗೆ ಆಸಕ್ತಿ ತೋರುತ್ತಿಲ್ಲ ಎಂದು ಹೇಳಲಾಗುತ್ತಿದೆ.

ಏತನ್ಮಧ್ಯೆ ಮುಂದಿನ ವರ್ಷ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ಬಳಿಕ ಆಸ್ಟ್ರೇಲಿಯಾಗೆ ಟೀಂ ಇಂಡಿಯಾ ಪ್ರವಾಸವನ್ನು ಕೈಗೊಳ್ಳಲಿದ್ದು, 2021ರ ಚಾಂಪಿಯನ್ಸ್ ಕ್ರಿಕೆಟ್ ಟೂರ್ನಿ ಭಾರತದಲ್ಲಿ ನಡೆಯಲಿದೆ. ಅಂತೆಯೇ ವಿಶ್ವ ಟೆಸ್ಟ್ ಕ್ರಿಕೆಟ್ ಚಾಂಪಿಯನ್ ಶಿಪ್ ನಡೆಸಲು ಐಸಿಸಿ ಮುಂದಾಗುತ್ತಿದ್ದು, ಸೋಮವಾರದಿಂದ ಆರಂಭವಾಗಲಿರುವ ಸಭೆಯಲ್ಲಿ ಈ ವಿಚಾರದ ಬಗ್ಗೆ ಚರ್ಚೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com