ಕೊಹ್ಲಿ ಜೊತೆಗಿನ ಭಿನ್ನಾಭಿಪ್ರಾಯವೇ ಕೋಚ್ ಕುಂಬ್ಳೆ ರಾಜೀನಾಮೆಗೆ ಪ್ರಮುಖ ಕಾರಣ!

ಕುಂಬ್ಳೆ ರಾಜೀನಾಮೆಗೆ ಭಾರತ ಕ್ರಿಕೆಟ್ ತಂಡದ ನಾಯಕ ಕೋಹ್ಲಿ ಜೊತೆಗಿನ ಭಿನ್ನಾಭಿಪ್ರಾಯವೇ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.
ವಿರಾಟ್ ಕೋಹ್ಲಿ-ಕುಂಬ್ಳೆ
ವಿರಾಟ್ ಕೋಹ್ಲಿ-ಕುಂಬ್ಳೆ
ಭಾರತೀಯ ಕ್ರಿಕೆಟ್ ತಂಡದ ಕೋಚ್ ಸ್ಥಾನಕ್ಕೆ ಅನಿಲ್ ಕುಂಬ್ಳೆ ರಾಜೀನಾಮೆ ನೀಡಿದ್ದು, ಕುಂಬ್ಳೆ ರಾಜೀನಾಮೆಗೆ ಕಾರಣವಾದ ಅಂಶಗಳ ಬಗ್ಗೆ ಚರ್ಚೆ ಮುಂದುವರೆದಿದೆ. ಈ ಬೆನ್ನಲ್ಲೇ ಕುಂಬ್ಳೆ ರಾಜೀನಾಮೆಗೆ ಭಾರತ ಕ್ರಿಕೆಟ್ ತಂಡದ ನಾಯಕ ಕೋಹ್ಲಿ ಜೊತೆಗಿನ ಭಿನ್ನಾಭಿಪ್ರಾಯವೇ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ. 
ಕುಂಬ್ಳೆ ರಾಜೀನಾಮೆ ನಂತರ ಮಾಡಿರುವ ಟ್ವೀಟ್ ನ ಹಿನ್ನೆಲೆಯಲ್ಲಿ ಈ ರೀತಿಯ ವಿಶ್ಲೇಷಣೆ ಮಾಡಲಾಗುತ್ತಿದೆ. "ಕೋಹ್ಲಿ ಅವರು ತಮ್ಮದೇ ಆದ ಕಟ್ಟುಪಾಡುಗಳನ್ನು ಹೊಂದಿದ್ದರು. ಕೋಹ್ಲಿ ನನ್ನ ಕೋಚಿಂಗ್ ಶೈಲಿಯ ಬಗ್ಗೆ ಭಿನ್ನಾಭಿಪ್ರಾಯ ಹೊಂದಿದ್ದರು ಎಂದು ಬಿಸಿಸಿಐ ತಿಳಿಸಿದೆ. ಭಿನ್ನಾಭಿಪ್ರಾಯಗಳನ್ನು ಬಗೆಹರಿಸುವುದಾಗಿ ಬಿಸಿಸಿಐ ಭರವಸೆ ನೀಡಿತಾದರೂ ರಾಜೀನಾಮೆ ನೀಡುವುದು ಸೂಕ್ತ ಎನಿಸಿತು" ಎಂದು ಕುಂಬ್ಳೆ ಟ್ವೀಟ್ ಮಾಡಿದ್ದಾರೆ. 
ಪಾಕಿಸ್ತಾನದ ವಿರುದ್ಧ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯವನ್ನು ಸೋತ ನಂತರ ಅನಿಲ್ ಕುಂಬ್ಳೆ ಬೌಲರ್ ಗಳನ್ನು ಪ್ರಶ್ನಿಸಿದ್ದರು, ಒಬ್ಬೊಬ್ಬರನ್ನೇ ಕರೆದು ಕುಂಬ್ಳೆ ಮಾತನಾಡಿದ್ದರು. ಈ ವೇಳೆ ತಮಗೆ ಕಿರಿಕಿರಿ ಉಂಟಾಗಿದೆ ಎಂದು ತಂಡದ ಅನೇಕ ಆಟಗಾರರು ಕೋಹ್ಲಿಗೆ ದೂರು ನೀಡಿದ್ದಾರೆ. ಇದಕ್ಕೂ ಮುನ್ನ ಕುಂಬ್ಳೆ ಹಾಗೂ ಕೋಹ್ಲಿ ನಡುವೆ ಭಿನ್ನಾಭಿಪ್ರಾಯವಿತ್ತು ಎಂದು ಹೇಳಲಾಗುತ್ತಿದ್ದು, ಭಿನ್ನಾಭಿಪ್ರಾಯ ಹಾಗೂ ದೂರಿನಿಂದ ಬೇಸರಗೊಂಡಿರುವ ಅನಿಲ್ ಕುಂಬ್ಳೆ ಕೋಚ್ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com