ಕುಂಬ್ಳೆ ರಾಜಿನಾಮೆ ನೀಡದಿದ್ದರೆ, ನಾಯಕ ಸ್ಥಾನ ತ್ಯಜಿಸುವೆ ಎಂದಿದ್ದ ಕೊಹ್ಲಿ?

ಅನಿಲ್ ಕುಂಬ್ಳೆ ವಿರುದ್ಧ ಅಸಮಾಧಾನಗೊಂಡಿದ್ದ ನಾಯಕ ವಿರಾಟ್ ಕೊಹ್ಲಿ ತಮ್ಮ ನಾಯಕ ಸ್ಥಾನಕ್ಕೆ ರಾಜಿನಾಮೆ ನೀಡಲು ಕೂಡ ಮುಂದಾಗಿದ್ದರು ಎಂದು ಹೇಳಲಾಗುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ಟೀಂ ಇಂಡಿಯಾ ಕೋಚ್ ಸ್ಥಾನಕ್ಕೆ ಅನಿಲ್ ಕುಂಬ್ಳೆ ರಾಜಿನಾಮೆ ಸಲ್ಲಿಸಿದ ಬೆನ್ನಲ್ಲೇ ಭಾರತ ತಂಡದಲ್ಲಿನ ಅಸಮಾಧಾನ ಒಂದೊಂದೇ ಹೊರಗೆ ಬರುತ್ತಿದ್ದು, ಅನಿಲ್ ಕುಂಬ್ಳೆ ವಿರುದ್ಧ ಅಸಮಾಧಾನಗೊಂಡಿದ್ದ ನಾಯಕ  ವಿರಾಟ್ ಕೊಹ್ಲಿ ತಮ್ಮ ನಾಯಕ ಸ್ಥಾನಕ್ಕೆ ರಾಜಿನಾಮೆ ನೀಡಲು ಕೂಡ ಮುಂದಾಗಿದ್ದರು ಎಂದು ಹೇಳಲಾಗುತ್ತಿದೆ.

ಖ್ಯಾತ ಆಂಗ್ಲ ಪತ್ರಿಕೆಯೊಂದು ವರದಿ ಮಾಡಿರುವಂತೆ, ಕುಂಬ್ಳೆ ಮತ್ತು ಕೊಹ್ಲಿ ನಡುವಿನ ಅಸಮಾಧಾನ ತಾರಕಕ್ಕೇರಿತ್ತು. ಈ ವೇಳೆ ಕುಂಬ್ಳೆ ಕೋಚ್ ಹುದ್ದೆಯಿಂದ ಕೆಳಗಿಳಯಬೇಕು ಎಂದು ನಾಯಕ ಕೊಹ್ಲಿ ಬಯಸಿದ್ದರು. ಒಂದು  ವೇಳೆ ಅವರು ಕೋಚ್ ಸ್ಥಾನದಿಂದ ಕೆಳಗಿಳಿಯದಿದ್ದರೆ ತಾವು ನಾಯಕನ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದರು ಎಂದು ವರದಿಯಲ್ಲಿ ಹೇಳಲಾಗಿದೆ. ಆದರೆ ಈ ಬಗ್ಗೆ ಕೊಹ್ಲಿ ಕ್ರಿಕೆಟ್ ಸಲಹಾ ಸಮಿತಿ ಸದಸ್ಯರಾದ ಸಚಿನ್  ತೆಂಡೂಲ್ಕರ್, ಸೌರವ್ ಗಂಗೂಲಿ ಹಾಗೂ ವಿವಿಎಸ್ ಲಕ್ಷ್ಮಣ್ ಅವರೊಂದಿಗೆ ಪ್ರಸ್ತಾಪಿಸಿದ್ದಾಗ ಅವರು ವಿರೋಧ ವ್ಯಕ್ತಪಡಿಸಿದ್ದರು. ಆದರೂ ಕೊಹ್ಲಿ ಪಟ್ಟು ಬಿಡದಿದ್ದಾಗ ಎಬ್ಬರೊಂದಿಗೆ ಸಭೆ ನಡೆಸಿದ್ದರು ಎಂದು ವರದಿ ಮಾಡಲಾಗಿದೆ.

ಇದೇ ಕಾರಣಕ್ಕೆ ಬಿಸಿಸಿಐ ಕುಂಬ್ಳೆ ಅವರ ಯಶಸ್ಸಿನ ಹೊರತಾಗಿಯೂ ಅವರ ಅವಧಿಯನ್ನು ವಿಸ್ತರಣೆ ಮಾಡದೇ ನೂತನ ಕೋಚ್ ಗಾಗಿ ಪ್ರಕಟಣೆ ಹೊರಡಿಸಿತ್ತು ಎಂದು ಹೇಳಲಾಗಿದೆ. ಈ ಎಲ್ಲ ಬೆಳವಣಿಗೆಗಳ ಒತ್ತಡದಿಂದಾಗಿ  ಕುಂಬ್ಳೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಕೋಚ್ ಇಲ್ಲದೇ ಇದೀಗ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿದೆ. ಇದೇ ಜೂನ್ 23 ಶುಕ್ರವಾರದಿಂದ ವೆಸ್ಟ್ ಇಂಡೀಸ್ ವಿರುದ್ಧ 5 ಪಂದ್ಯಗಳ ಏಕದಿನ ಸರಣಿ  ಆರಂಭವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com