ಭಾರತ ಕ್ರಿಕೆಟ್ ತಂಡದ ಕೋಚ್ ಸ್ಥಾನಕ್ಕೆ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ರಾಜೀನಾಮೆ ನೀಡಿರುವ ಬಗ್ಗೆ ಹಿರಿಯ ಆಟಗಾರರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಕುಂಬ್ಳೆ ಸ್ಥಾನವನ್ನು ತುಂಬುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದ ಬೆನ್ನಲ್ಲೇ ಸೌರವ್ ಗಂಗೂಲಿ ಪ್ರತಿಕ್ರಿಯೆ ನೀಡಿದ್ದು, ರಾಜೀನಾಮೆ ನೀಡಿರುವುದು ಕುಂಬ್ಳೆ ಅವರ ವೈಯಕ್ತಿಕ ನಿರ್ಧಾರ ಈ ಬಗ್ಗೆ ಏನೂ ಹೇಳುವುದಿಲ್ಲ ಎಂದಿದ್ದಾರೆ.