ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ಅನಿಲ್ ಕುಂಬ್ಳೆ ರಾಜಿನಾಮೆ ನೀಡಿದ ಬಳಿಕ ಕೋಚ್ ಹುದ್ದೆಯ ಆಕಾಂಕ್ಷಿಗಳ ಪಟ್ಟಿ ದಿನೇ ದಿನೇ ಬೆಳೆಯುತ್ತಿದೆ.
ಟೀಂ ಇಂಡಿಯಾದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಇದೀಗ ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಸಾದ್ ಅವರು ಟೀಂ ಇಂಡಿಯಾ ಪರ 33 ಟೆಸ್ಟ್ ಮತ್ತು 162 ಏಕದಿನ ಪಂದ್ಯಗಳನ್ನು ಆಡಿದ್ದಾರೆ.
ಭಾರತದ ಜೂನಿಯರ್ ತಂಡದ ಮುಖ್ಯ ಆಯ್ಕೆಗಾರರಾಗಿರುವ ವೆಂಕಟೇಶ್ ಪ್ರಸಾದ್ ಅವರು ಮೂರು ವರ್ಷದ ಗುತ್ತಿಗೆ ಅವಧಿ ಇದೇ ಸೆಪ್ಟೆಂಬರ್ ತಿಂಗಳಲ್ಲಿ ಮುಕ್ತಾಯಗೊಳ್ಳಲಿದೆ.
ಇನ್ನು ಇದೇ ಜೂನ್ 27 ರಂದು ರವಿಶಾಸ್ತ್ರಿ ಅವರು ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ ಬಳಿಕ ಇದೀಗ ವೆಂಕಟೇಶ್ ಅರ್ಜಿ ಸಲ್ಲಿಸಿದ್ದಾರೆ.