ಟಾಂಟನ್: ಐಸಿಸಿ ಮಹಿಳಾ ವಿಶ್ವಕಪ್ ನಲ್ಲಿ ಭಾರತದ ಮಹಿಳಾ ತಂಡ ಗೆಲುವಿನ ನಾಗಾಲೋಟ ಮುಂದುವರೆಸಿದೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಭಾರತ ಏಳು ವಿಕೆಟ್ ಗಳಿಂದ ಜಯ ಗಳಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ನಿಗದಿತ ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 183 ರನ್ ಬಾರಿಸಿತ್ತು. 184 ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಮಹಿಳಾ ತಂಡ 42.3 ಓವರ್ ನಲ್ಲಿ 3 ವಿಕೆಟ್ ನಷ್ಟಕ್ಕೆ 186 ರನ್ ಸಿಡಿಸುವ ಮೂಲಕ ಗೆಲುವಿನ ನಗೆ ಬೀರಿತು.
ಭಾರತ ಪರ ಸ್ಮತಿ ಮಂದನಾ(106 ರನ್) ಅಮೋಘ ಶತಕ ಸಿಡಿಸಿ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಇನ್ನು ಟೂರ್ನಿಯಲ್ಲಿ ಭಾರತ ಆಡಿರುವ ಎರಡು ಪಂದ್ಯಗಳಲ್ಲೂ ಜಯ ಗಳಿಸಿದೆ.