ಬೆಂಗಳೂರು: ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ತವರು ನೆಲದಲ್ಲಿ ಕಳಪೆ ಪ್ರದರ್ಶನ ನೀಡುತ್ತಿದ್ದು ಇದಕ್ಕೆ ಕಾರಣ ಕೊಹ್ಲಿ ಬ್ಯಾಟಿಂಗ್ ನಲ್ಲಿ ಚಂಚಲಗೊಳ್ಳುತ್ತಿರುವುದು ಎಂದು ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಮಾರ್ಕ ವಾ ಹೇಳಿದ್ದಾರೆ.
ಕೊಹ್ಲಿ ಬ್ಯಾಟಿಂಗ್ ಮಾಡುವಾಗ ಬಹಳ ನಕಾರಾತ್ಮಕವಾಗಿ ಯೋಚನೆ ಮಾಡುತ್ತಾ ಚಂಚಲಗೊಳ್ಳುತ್ತಿರುವುದು ಇತರ ಆಟಗಾರರ ಮೇಲೆ ಪರಿಣಾಮ ಬೀರುತ್ತಿದೆ ಎಂದು ಮಾರ್ಕ್ ಹೇಳಿದ್ದಾರೆ.
ನಕಾರಾತ್ಮಕವಾಗಿ ಯೋಚಿಸುವ ಮೂಲಕ ಮೈದಾನದಲ್ಲಿ ಕೊಹ್ಲಿ ಏಕಾಗ್ರತೆ ಕಳೆದುಕೊಳ್ಳುತ್ತಿದ್ದು ಬೇಗನೆ ವಿಕೆಟ್ ಒಪ್ಪಿಸುತ್ತಿದ್ದಾರೆ. ಅವರಂತೆ ಉಳಿದ ಆಟಗಾರರು ಸಹ ಮೈದಾನದಲ್ಲಿ ಹೆಚ್ಚು ಹೊತ್ತು ಆಟವಾಡುತ್ತಿಲ್ಲ ಎಂದು ಹೇಳಿದ್ದಾರೆ.
ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಪಂದ್ಯ ಪುಣೆಯಲ್ಲಿ ನಡೆದಿದ್ದು ಕಳಪೆ ಪ್ರದರ್ಶನದಿಂದಾಗಿ ಆಸೀಸ್ ವಿರುದ್ಧ 333 ರನ್ ಗಳ ಅಂತರದಿಂದ ಹೀನಾಯ ಸೋಲು ಅನುಭವಿಸಿತ್ತು. ಇದೀಗ ಬೆಂಗಳೂರಿನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲೂ ಕೊಹ್ಲಿ ಪಡೆ ಚಾರ್ಮ್ ಕಳೆದುಕೊಂಡಿರುವುದು ಚಿಂತೆಗೀಡು ಮಾಡಿದೆ.