ಬೆಂಗಳೂರು ಟೆಸ್ಟ್: 2ನೇ ದಿನದಾಟಕ್ಕೆ ಆಸ್ಟ್ರೇಲಿಯಾ 6 ವಿಕೆಟ್ ನಷ್ಟಕ್ಕೆ 237 ರನ್

ಭಾರತ-ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂತ್ಯಕ್ಕೆ ಆಸ್ಟ್ರೇಲಿಯಾ 6 ವಿಕೆಟ್ ಕಳೆದುಕೊಂಡು 237 ರನ್ ಗಳಿಸಿದೆ...
ಟೀಂ ಇಂಡಿಯಾ
ಟೀಂ ಇಂಡಿಯಾ
Updated on: 
ಬೆಂಗಳೂರು: ಭಾರತ-ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂತ್ಯಕ್ಕೆ ಆಸ್ಟ್ರೇಲಿಯಾ 6 ವಿಕೆಟ್ ಕಳೆದುಕೊಂಡು 237 ರನ್ ಗಳಿಸಿದೆ. 
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ 237 ರನ್ ಸಿಡಿಸಿದ್ದು 48 ರನ್ ಗಳ ಮುನ್ನಡೆ ಸಾಧಿಸಿದೆ. ಮೊದಲ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ ಆಸೀಸ್ 40 ರನ್ ಗಳಿಸಿತ್ತು. ಇಂದು 
ಎರಡನೇ ದಿನದಾಟ ಪ್ರಾರಂಭಿಸಿದ ಡೇವಿಡ್ ವಾರ್ನರ್ ಮತ್ತು ಮ್ಯಾಟ್ ರೆನ್ ಶಾ ಉತ್ತಮ ಆರಂಭ ತಂದುಕೊಟ್ಟರು. 33 ರನ್ ಗಳಿಸಿದ್ದಾಗ ವಾರ್ನರ್ ಅಶ್ವಿನ್ ಎಸೆತದಲ್ಲಿ ಬೌಲ್ಡ್ ಆಗಿ ನಿರ್ಗಮಿಸಿದರು. ಬಳಿಕ ಬಂದ ಸ್ಮಿತ್ 8 ರನ್ ಗಳಿಸಿ ಪೆವಿಲಿಯನ್ ಸೇರಿದರು. ಈ ವೇಳೆ 
ಬಂದ ಮಾರ್ಷ್ ಉತ್ತಮವಾಗಿ ಬ್ಯಾಟ್ ಬೀಸಿದ್ದು 66 ರನ್ ಗಳಿಸಿದರು. ಹ್ಯಾಂಡ್ಸ್ ಕೂಂಬ್ 16 ರನ್ ಮತ್ತು ಮಿಚೆಲ್ ಮಾರ್ಷ್ 0 ರನ್ ಗಳಿಸಿ ಔಟಾಗಿದ್ದಾರೆ. ಸದ್ಯ ವಾಡೆ ಅಜೇಯ 25 ಮತ್ತು ಸ್ಟಾರ್ಕ್ 14 ರನ್ ಗಳಿಸಿ ಮೂರನೇ ದಿನಕ್ಕೆ ಆಟ ಪ್ರಾರಂಭಿಸಲಿದ್ದಾರೆ. 
ಭಾರತ ಪರ ರವೀಂದ್ರ ಜಡೇಜಾ 3, ಇಶಾಂತ್ ಶರ್ಮಾ, ಉಮೇಶ್ ಯಾದವ್, ಆರ್ ಅಶ್ವಿನ್ ತಲಾ 1 ವಿಕೆಟ್ ಪಡೆದಿದ್ದಾರೆ. 
ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ 189 ರನ್ ಗಳಿಗೆ ಆಲೌಟ್ ಆಗಿತ್ತು. ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲ್ಯಾನ್ 8 ವಿಕೆಟ್ ಪಡೆದಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com