ಅಂತಾರಾಷ್ಟ್ರೀಯ ಕ್ರಿಕೆಟಿಗನಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ನೀಡುವ ಪ್ರತಿಷ್ಠಿತ ಪಾಲಿ ಉಮ್ರಿಗರ್ ಪ್ರಶಸ್ತಿಯನ್ನು ಮೂರನೇ ಬಾರಿಗೆ ವಿರಾಟ್ ಕೊಹ್ಲಿ ಪಡೆದಿದ್ದಾರೆ. ನಿನ್ನೆ ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪಡೆದು ಮಾತನಾಡಿದ ವಿರಾಟ್ ಯಾವಾಗಲೂ ನಾನು ವಿಶ್ವ ಶ್ರೇಷ್ಠನಾಗಿರಲು ಬಯಸುತ್ತೇನೆ ಎಂದರು.