
ನವದೆಹಲಿ: ಉತ್ತರ ಪ್ರದೇಶ ಮತ್ತು ಉತ್ತರಾಖಂಡ್ ನಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದಕ್ಕೆ ಭಾರತೀಯ ಕ್ರಿಕೆಟರ್ ಮೊಹಮದ್ ಕೈಫ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಚುನಾವಣಾ ಫಲಿತಾಂಶ ಸಂಬಂಧ ಟ್ವೀಟ್ ಮಾಡಿರುವ ಮೊಹಮದ್ ಕೈಫ್ ಇದೊಂದು ಅದ್ಭುತ ಗೆಲುವು ಎಂದು ಹೇಳಿದ್ದಾರೆ.
14 ವರ್ಷದ ನಂತರ ಉತ್ತರ ಪ್ರದೇಶದಲ್ಲಿ 403 ಕ್ಷೇತ್ರಗಳ ಪೈಕಿ 319 ಕ್ಷೇತ್ರಗಳಲ್ಲಿ ಬಿಜೆಪಿಯದ್ದು ಬಹುದೊಡ್ಡ ವಿಜಯವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಮೊಹಮದ್ ಕೈಫ್ 2015 ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಫುಲ್ಪುರ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು, ಬಿಜೆಪಿ ವಿಜಯಕ್ಕೆ ಅಭಿನಂದನೆ ಸಲ್ಲಿಸಿರುವ ಮೊದಲ ಕ್ರೀಡಾ ಕ್ಷೇತ್ರದ ವ್ಯಕ್ತಿ ಮೊಹಮದ್ ಕೈಫ್.
ಇನ್ನೂ ಪಂಜಾಬ್ ನಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ಸಹಾಯ ಮಾಡಿರುವ ಅಮರಿಂದರ್ ಸಿಂಗ್ ಅವರಿಗೂ ಮೊಹಮದ್ ಕೈಫ್ ಶುಭಾಶಯ ಹೇಳಿದ್ದಾರೆ.
Advertisement