ನವದೆಹಲಿ: ಅಂಧರ ಟಿ20 ವಿಶ್ವಕಪ್ ತಂಡವನ್ನು ಸೋಲಿಸಿ ಸತತ 2ನೇ ಬಾರಿಗೆ ಚಾಂಪಿಯನ್ ಆಗಿದ್ದ ಅಂಧರ ಕ್ರಿಕೆಟ್ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) 1 ಕೋಟಿ ಬಹುಮಾನ ನೀಡಿದೆ.
ಇದೇ ಮೊದಲ ಬಾರಿಗೆ ತನ್ನ ಮಾನ್ಯತೆಯಿಲ್ಲದ ಕ್ರಿಕೆಟ್ ತಂಡಕ್ಕೆ ಬಿಸಿಸಿಐ ದೊಡ್ಡ ಮೊತ್ತದ ನಗದು ಬಹುಮಾನ ಘೋಷಿಸಿದೆ. ಬೆಂಗಳೂರಿನಲ್ಲಿ ನಡೆದ ಅಂಧರ ಟಿ20 ವಿಶ್ವಕಪ್ ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಭಾರತ ಮಣಿಸಿತ್ತು.
ಸುಪ್ರೀಂಕೋರ್ಟ್ ನೇಮಿಸಿರುವ ಕ್ರಿಕೆಟ್ ಆಡಳಿತಾಧಿಕಾರಿಗಳ ಸಮಿತಿ(ಸಿಒಎ) ನಡೆಸಿದ ಸಭೆಯಲ್ಲಿ ಈ ತೀರ್ಮಾನ ಕೈಗೊಂಡಿದೆ.