ಚೇತೇಶ್ವರ ಪೂಜಾರ
ಚೇತೇಶ್ವರ ಪೂಜಾರ

ರಾಂಚಿ ಟೆಸ್ಟ್: ಚೇತೇಶ್ವರ ಪೂಜಾರ ಭರ್ಜರಿ ಮೂರನೇ ದ್ವಿಶತಕ

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಚೇತೇಶ್ವರ ಪೂಜಾರ ಭರ್ಜರಿ ದ್ವಿಶತಕ ಸಿಡಿಸಿದ್ದಾರೆ...
ರಾಂಚಿ: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಚೇತೇಶ್ವರ ಪೂಜಾರ ಭರ್ಜರಿ ದ್ವಿಶತಕ ಸಿಡಿಸಿದ್ದಾರೆ. 
ರಾಂಚಿಯ ಜೆಎಸ್ಸಿಎ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಪಂದ್ಯದಲ್ಲಿ ಚೇತೇಶ್ವರ ಪೂಜಾರ 202 ರನ್ ಸಿಡಿಸಿ ಭಾರತಕ್ಕೆ ಭರ್ಜರಿ ಮುನ್ನಡೆ ತಂದುಕೊಟ್ಟಿದ್ದಾರೆ. 
43 ಟೆಸ್ಟ್ ಪಂದ್ಯಗಳನ್ನು ಆಡಿರುವ ಪೂಜಾರ ಮೂರು ದ್ವಿಶತಕಗಳನ್ನು ಸಿಡಿಸಿದ್ದಾರೆ. 2012ರಲ್ಲಿ ಅಹಮದಾಬಾದ್ ನ ಸರ್ದಾರ್ ಪಟೇಲ್ ಕ್ರೀಡಾಂಗಣದಲ್ಲಿ ನಡೆಯದ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಪೂಜಾರ (ಅಜೇಯ 206 ರನ್) ಮೊದಲ ಟೆಸ್ಟ್ ದ್ವಿಶತಕ ಸಿಡಿಸಿದ ಸಾಧನೆ ಮಾಡಿದ್ದರು. ನಂತರ 2013ರಲ್ಲಿ ಹೈದರಾಬಾದ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಪಂದ್ಯದಲ್ಲಿ 204 ರನ್ ಸಿಡಿಸಿದ್ದರು. ಇದಾದ ಬಳಿಕ ಮತ್ತೆ ಆಸ್ಟ್ರೇಲಿಯಾ ವಿರುದ್ಧ 202 ರನ್ ಗಳಿಸುವ ಮೂಲಕ ಮೂರನೇ ಅಂತಾರಾಷ್ಟ್ರೀಯ ದ್ವಿಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ. 

Related Stories

No stories found.

Advertisement

X
Kannada Prabha
www.kannadaprabha.com