ಕ್ರಿಕೆಟ್

ರಾಂಚಿ ಟೆಸ್ಟ್: 603 ರನ್ಗೆ ಭಾರತ ಡಿಕ್ಲೇರ್, 23ಕ್ಕೆ 2 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿ ಆಸೀಸ್

ರಾಂಚಿ ಟೆಸ್ಟ್: 603 ರನ್ಗೆ ಭಾರತ ಡಿಕ್ಲೇರ್, 23ಕ್ಕೆ 2 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿ ಆಸೀಸ್
ಜಡೇಜಾ
Published On :
ರಾಂಚಿ: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 603 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡು 152 ರನ್ ಗಳ ಭರ್ಜರಿ ಮುನ್ನಡೆ ಪಡೆದಿದೆ. 
ರಾಂಚಿಯಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಭಾರತ 603 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡಿತು. ಇದರೊಂದಿಗೆ 152 ರನ್ ಮುನ್ನಡೆ ಸಾಧಿಸಿದೆ. ನಂತರ ಎರಡನೇ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ನಾಲ್ಕನೇ ದಿನದಾಟದಂತ್ಯಕ್ಕೆ 23 ರನ್ ಗಳಿಗೆ ಎರಡು ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಡೇವಿಡ್ ವಾರ್ನರ್ 14 ಮತ್ತು ನಾಥನ್ ಲ್ಯಾನ್ 7 ರನ್ ಗಳಿಸಿ ಔಟಾಗಿದ್ದಾರೆ. 
ನಾಳೆ ಕೊನೆಯ ದಿನವಾಗಿದ್ದು ಆಸ್ಟ್ರೇಲಿಯಾ ಮುನ್ನಡೆಗಾಗಿ 129 ರನ್ ಸಿಡಿಸಿಬೇಕಿದೆ. ಇನ್ನು ಆಸ್ಟ್ರೇಲಿಯಾ ತಂಡವನ್ನು ಅಲ್ಪಮೊತ್ತಕ್ಕೆ ಕೊಹ್ಲಿ ಪಡೆ ಆಲೌಟ್ ಮಾಡಿದರೆ ಭಾರತ ರಾಂಚಿ ಪಂದ್ಯವನ್ನು ಗೆಲುವ ಸಾಧ್ಯತೆ ಇದೆ. 
ಟೀಂ ಇಂಡಿಯಾ ಪರ ರವೀಂದ್ರ ಜಡೇಜಾ ಡೇವಿಡ್ ವಾರ್ನರ್ ಮತ್ತು ನಾಥನ್ ಲ್ಯಾನ್ ರನ್ನು ಬೌಲ್ಡ್ ಮಾಡುವ ಮೂಲಕ ಎರಡು ವಿಕೆಟ್ ಪಡೆದಿದ್ದಾರೆ. 
ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ ನಲ್ಲಿ 451 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಬ್ಯಾಟಿಂಗ್ ಮಾಡಿದ್ದ ಭಾರತ ಪರ ಚೇತೇಶ್ವರ ಪೂಜಾರ ದ್ವಿಶತಕ ಮತ್ತು ವೃದ್ಧಿಮಾನ್ ಸಾಹಾರ ಶತಕದೊಂದಿಗೆ ಟೀಂ ಇಂಡಿಯಾ 603 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡಿತು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.