ನಾನು 2019ರ ವಿಶ್ವಕಪ್ ನಲ್ಲೂ ಆಡುತ್ತೇನೆ: ಧೋನಿ

ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ತಮ್ಮ ನಿವೃತ್ತಿ ವಿಚಾರದ ಬಗ್ಗೆ ಮೌನ ಮುರಿದಿದ್ದು 2019ರ ವಿಶ್ವಕಪ್ ನಲ್ಲಿ ಖಂಡಿತವಾಗಿಯೂ ಆಡುತ್ತೇನೆ ಎಂದು ಹೇಳಿದ್ದಾರೆ...
ಎಂಎಸ್ ಧೋನಿ
ಎಂಎಸ್ ಧೋನಿ
Updated on: 
ನವದೆಹಲಿ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ತಮ್ಮ ನಿವೃತ್ತಿ ವಿಚಾರದ ಬಗ್ಗೆ ಮೌನ ಮುರಿದಿದ್ದು 2019ರ ವಿಶ್ವಕಪ್ ನಲ್ಲಿ ಖಂಡಿತವಾಗಿಯೂ ಆಡುತ್ತೇನೆ ಎಂದು ಹೇಳಿದ್ದಾರೆ. 
ಧೋನಿ ಶೀಘ್ರದಲ್ಲೇ ಕ್ರಿಕೆಟ್ ಬದುಕಿಗೆ ನಿವೃತ್ತಿ ನೀಡಲಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿದ್ದು ಈ ಬಗ್ಗೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಂಎಸ್ ಧೋನಿ, ತಮಗೆ ಯಾವುದೇ ಗಾಯಗಳಾಗದೇ ಫಿಟ್ ಆಗಿದ್ದರೇ ಕಂಡಿತವಾಗಿಯೂ 2019ರ ವಿಶ್ವಕಪ್ ನಲ್ಲಿ ಆಡುತ್ತೇನೆ ಎಂದು ಹೇಳಿದ್ದಾರೆ. 
ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತರಾಗಿರುವ ಧೋನಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಬಳಿಕ ಏಕದಿನ ಹಾಗೂ ಟಿ20ಗೆ ವಿದಾಯ ಹೇಳಲಿದ್ದಾರೆ ಎಂದು ವರದಿಯಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com