ಐಪಿಎಲ್‌ ತಯಾರಿಗಾಗಿ ಕೊಹ್ಲಿ ಟೆಸ್ಟ್ ನಿಂದ ದೂರ ಉಳಿದಿದ್ದಾರೆ: ಬ್ರಾಡ್ ಹಾಡ್ಜ್

ಮುಂದಿನ ತಿಂಗಳಿನಿಂದ ಆರಂಭವಾಗಲಿರುವ ಐಪಿಎಲ್ ಟೂರ್ನಿ ಸಲುವಾಗಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ನಾಲ್ಕನೇ ಟೆಸ್ಟ್ ಪಂದ್ಯದಿಂದ...
ಬ್ರಾಡ್ ಹಾಡ್ಜ್
ಬ್ರಾಡ್ ಹಾಡ್ಜ್
ಮೆಲ್ಬೋರ್ನ್: ಮುಂದಿನ ತಿಂಗಳಿನಿಂದ ಆರಂಭವಾಗಲಿರುವ ಐಪಿಎಲ್ ಟೂರ್ನಿ ಸಲುವಾಗಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ನಾಲ್ಕನೇ ಟೆಸ್ಟ್ ಪಂದ್ಯದಿಂದ ದೂರ ಉಳಿದಿದ್ದಾರೆ ಎಂದು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಬ್ರಾಡ್ ಹಾಡ್ಜ್ ವಿಲಕ್ಷಣ ಪ್ರಚೋದಿತ ಆರೋಪ ಮಾಡಿದ್ದಾರೆ. 
ಏಪ್ರಿಲ್ 5ರಂದು ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೇವಿಡ್ ವಾರ್ನರ್ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್ ನಡುವಿನ ಐಪಿಎಲ್ ಪಂದ್ಯ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಕೊಹ್ಲಿ ಧರ್ಮಶಾಲಾ ಟೆಸ್ಟ್ ನಿಂದ ದೂರ ಉಳಿದಿದ್ದಾರೆ ಎಂದು ಗುಜರಾತ್ ಲಯನ್ಸ್ ತಂಡದ ಕೋಚ್ ಆಗಿರುವ ಬ್ರಾಡ್ ಹಾಡ್ಜ್ ಅಭಿಪ್ರಾಯ ಪಟ್ಟಿದ್ದಾರೆ. 
ಮುಂದಿನ ವಾರ ಚಿನ್ನಸ್ವಾಮಿ ಕ್ರೀಡಾಂಗಣ ಆರ್ಸಿಬಿ ಮೊದಲ ಪಂದ್ಯ ನಡೆಯಲಿದ್ದು ಇದಕ್ಕಾಗಿ ನಾಯಕ ವಿರಾಟ್ ಕೊಹ್ಲಿ ಮೈದಾನಕ್ಕೆ ಇಳಿಯದೆ ಆಸ್ಟ್ರೇಲಿಯಾ ವಿರುದ್ಧದ ಮಹತ್ವದ ಟೆಸ್ಟ್ ಪಂದ್ಯವನ್ನು ಕಳೆದುಕೊಂಡಿದ್ದಾರೆ ಎಂದು ಬ್ರಾಡ್ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com