ಧರ್ಮಶಾಲಾ ಕ್ರಿಕೆಟ್ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಮೊದಲೆರೆಡು ಇನ್ನಿಂಗ್ಸ್ ನಲ್ಲೂ ಅರ್ಧ ಶತಕ ಸಿಡಿಸಿದ್ದಾರೆ. ಮೊದಲ ಇನ್ನಿಂಗ್ಸ್ ನಲ್ಲಿ ರಾಹುಲ್ 60 ರನ್ ಗಳಿಸಿ ಔಟಾಗಿದ್ದ ರಾಹುಲ್ ದ್ವಿತೀಯ ಇನ್ನಿಂಗ್ಸ್ ಅಜೇಯ 51 ರನ್ ಸಿಡಿಸುವ ಮೂಲಕ ಆಸ್ಟ್ರೇಲಿಯಾ ವಿರುದ್ಧದ ಸರಣಿಯೊಂದರಲ್ಲಿ ಆರು ಅರ್ಧಶತಕ ಸಿಡಿಸಿದ ಮೊದಲ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.