ಉಭಯ ಕ್ರಿಕೆಟ್ ಮಂಡಳಿಗಳು 2014ರಲ್ಲಿ ಮಾಡಿಕೊಂಡಿದ್ದ ಒಪ್ಪಂದ ಪ್ರಕಾರ ಮುಂದಿನ ನವೆಂಬರ್ ನಲ್ಲಿ ಪಾಕಿಸ್ತಾನ ವಿರುದ್ಧ ದುಬೈನಲ್ಲಿ ಟೂರ್ನಿ ಆಡಬೇಕಿದೆ. ಈ ಸಂಬಂಧ ಬಿಸಿಸಿಐ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಅನುಮತಿ ನೀಡುವಂತೆ ಕೇಳಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ರಾಜ್ಯ ಖಾತೆ ಸಚಿವ ಹನ್ಸ್ ರಾಜ್ ಅಹಿರ್ ಗೃಹ ಸಚಿವರು ಮತ್ತು ಗೃಹ ಸಚಿವಾಲಯ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಆದರೆ ಜಮ್ಮು ಮತ್ತು ಕಾಶ್ಮೀರದ ಸದ್ಯದ ಪರಿಸ್ಥಿತಿಯನ್ನು ಗಮನಿಸಿದಾಗ ಅನುಮತಿ ಲಭಿಸುವ ಸಾಧ್ಯತೆ ಇಲ್ಲ ಎಂದು ಹೇಳಿದ್ದಾರೆ.