ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ವಿರಾಟ್ ಕೊಹ್ಲಿ ಪಡೆ ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಹೀನಾಯ ಸೋಲುಗಳನ್ನು ಕಂಡಿದೆ. ಆಡಿರುವ 13 ಪಂದ್ಯಗಳಲ್ಲಿ 2 ಪಂದ್ಯವನ್ನು ಮಾತ್ರ ಗೆದ್ದಿದೆ. 10 ವರ್ಷಗಳ ಐಪಿಎಲ್ ಇತಿಹಾಸದಲ್ಲಿ ಬೆಂಗಳೂರು ತಂಡ ಒಂದು ಆವೃತ್ತಿಯಲ್ಲಿ 10 ಪಂದ್ಯಗಳನ್ನು ಸೋತಿರುವುದು ಇದೇ ಮೊದಲು.