ಶ್ರೀಲಂಕಾ ಸರಣಿಗೆ ಟೀಂ ಇಂಡಿಯಾಗೆ ಮರಳುವ ವಿಶ್ವಾಸದಲ್ಲಿ ಕೆಎಲ್ ರಾಹುಲ್

ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಟೀಂ ಇಂಡಿಯಾದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಮುಂದಿನ ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯರಾಗಿದ್ದು ನಂತರ ಆಗಸ್ಟ್ ನಲ್ಲಿ...
ಕೆಎಲ್ ರಾಹುಲ್
ಕೆಎಲ್ ರಾಹುಲ್
Updated on: 
ಮುಂಬೈ: ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಟೀಂ ಇಂಡಿಯಾದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಮುಂದಿನ ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯರಾಗಿದ್ದು ನಂತರ ಆಗಸ್ಟ್ ನಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ ಸರಣಿಗೆ ತಂಡಕ್ಕೆ ಮರಳುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. 
ಆಸ್ಟ್ರೇಲಿಯಾ ವಿರುದ್ಧದ ಕಳೆದ ಟೆಸ್ಟ್ ಸರಣಿಯಲ್ಲಿ ಭುಜದ ಗಾಯಕ್ಕೆ ತುತ್ತಾದ ರಾಹುಲ್ ನಂತರ ಇಂಡಿಯನ್ ಪ್ರಿಮಿಯರ್ ಲೀಗ್ ನಿಂದ ಹೊರ ಉಳಿದರು. ಇದೀಗ ಚಾಂಪಿಯನ್ಸ್ ಟ್ರೋಫಿಯಿಂದಲೂ ಹೊರ ಗುಳಿದಿದ್ದಾರೆ. 
ಶಸ್ತ್ರಚಿಕಿತ್ಸೆಗೆ ಒಳಗಾಗಿ ಒಂದು ತಿಂಗಳು ಕಳೆದಿದೆ. ಸಂಪೂರ್ಣ ಗುಣಮುಖನಾಗಲು ಒಟ್ಟಾರೆ 2 ತಿಂಗಳು ಬೇಕಾಗಬಹುದು. ಹೀಗಾಗಿ ಆಗಸ್ಟ್ ನಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ ಸರಣಿಗೆ ಸರಣಿಗೆ ಮರಳುವ ನಿರೀಕ್ಷೆಯಲ್ಲಿದ್ದೇನೆ ಎಂದು ರಾಹುಲ್ ತಿಳಿಸಿದ್ದಾರೆ. 
ಆತಿಥೇಯ ಶ್ರೀಲಂಕಾ ಮತ್ತು ಭಾರತ ನಡುವೆ ಆಗಸ್ಟ್ ನಲ್ಲಿ 3 ಟೆಸ್ಟ್, 5 ಏಕದಿನ ಮತ್ತು 1 ಟಿ20 ಪಂದ್ಯಗಳ ಸರಣಿ ನಡೆಯಲಿದೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com