ಟೀಂ ಇಂಡಿಯಾ ಕೋಚ್ ಹುದ್ದೆಗೆ ಅರ್ಜಿ ಆಹ್ವಾನ, ಕುಂಬ್ಳೆ ಅವಧಿ ಸ್ವಯಂ ವಿಸ್ತರಣೆ ಇಲ್ಲ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಟೀ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ಗುರುವಾರ ಹೊಸದಾಗಿ ಅರ್ಜಿಗಳನ್ನು....
ಅನಿಲ್ ಕುಂಬ್ಳೆ
ಅನಿಲ್ ಕುಂಬ್ಳೆ
ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಟೀ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ಗುರುವಾರ ಹೊಸದಾಗಿ ಅರ್ಜಿಗಳನ್ನು ಆಹ್ವಾನಿಸಿದ್ದು, ಇದರೊಂದಿಗೆ ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಅನಿಲ್ ಕುಂಬ್ಳೆ ಅವರ ಅವಧಿಯನ್ನು ಸ್ವಯಂ ವಿಸ್ತರಣೆ ಮಾಡದಿರಲು ನಿರ್ಧರಿಸಲಾಗಿದೆ. 
ಕಳೆದ ವರ್ಷ ಭಾರತ ತಂಡ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳುವ ಮುನ್ನ ಒಂದು ವರ್ಷದ ಅವಧಿಗೆ ಟೀಂ ಇಂಡಿಯಾ ಕೋಚ್ ಆಗಿ ಆಯ್ಕೆಯಾಗಿದ್ದ ಅನಿಲ್ ಕುಂಬ್ಳೆ ಅವರ ಒಪ್ಪಂದದ ಅವಧಿ ಚಾಂಪಿಯನ್ಸ್ ಟ್ರೋಫಿಯ ನಂತರ ಜೂನ್ ಅಂತ್ಯಕ್ಕೆ ಕೊನೆಗೊಳ್ಳಲಿದೆ. ಹೀಗಾಗಿ ಬಿಸಿಸಿಐ ಗುರುವಾರ ನೂತನ ಕೋಚ್ ಗಾಗಿ ಆರ್ಜಿ ಆಹ್ವಾನಿಸಿದೆ.
ಕೋಚ್ ಹುದ್ದೆ ಬಗ್ಗೆ ಆಸಕ್ತಿ ಇರುವ ಅಭ್ಯರ್ಥಿಗಳು ಮೇ 31ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಹಿರಿಯ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಮತ್ತು ವಿವಿಎಸ್ ಲಕ್ಷ್ಮಣ್ ಅವರನ್ನೊಳಗೊಂಡ ಕ್ರಿಕೆಟ್ ಸಲಹಾ ಸಮಿತಿ ಕೋಚ್ ಹುದ್ದೆ ಆಕಾಂಕ್ಷಿಗಳ ಸಂದರ್ಶನ ನಡೆಸಲಿದೆ.
ಕೋಚ್ ಹುದ್ದೆಯ ನೇಮಕಾತಿಯನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಲು ಆಡಳಿತಾಧಿಕಾರಿಗಳ ಸಮಿತಿಯಿಂದ ಓರ್ವ ವ್ಯಕ್ತಿಯನ್ನು ನೇಮಿಸಲಾಗಿದೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.
ಇತ್ತೀಚಿಗಷ್ಟೇ ಟೀಂ ಇಂಡಿಯಾದ ಎ ಗ್ರೇಡ್ ಆಟಗಾರರಿಗೆ ಶೇ.150ರಷ್ಟು ಸಂಭಾವನೆ ಹೆಚ್ಚಳ ಮಾಡುವಂತೆ ಕೇಳಿಕೊಂಡಿದ್ದರು. ಇದು ಬಿಸಿಸಿಐ ಆಡಳಿತ ಮಂಡಳಿಯ ಅಸಮಾಧಾನಕ್ಕೆ ಕಾರಣವಾಗಿತ್ತು. ಹೀಗಾಗಿ ಭಾರತದ ಚಾಂಪಿಯನ್ಸ್ ಟ್ರೋಫಿ ಅಭಿಯಾನದ ಅಂತ್ಯದೊಂದಿಗೆ ಕುಂಬ್ಳೆ ಅವರ ಕೋಚಿಂಗ್ ಒಪ್ಪಂದವೂ ಕೊನೆಯಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com