ಪಾಕ್ ಭಯೋತ್ಪಾದಕರು ಕಾಬೂಲ್ ನಲ್ಲಿ ಭಯೋತ್ಪಾದಕ ದಾಳಿ ನಡೆಸಿದ ಬೆನ್ನಲ್ಲೇ ಅಪ್ಘಾನಿಸ್ತಾನ ಪಾಕಿಸ್ತಾನದೊಂದಿಗಿನ ಎಲ್ಲಾ ಕ್ರಿಕೆಟ್ ಯೋಜನೆಗಳಿಗೂ ತಿಲಾಂಜಲಿ ಇತ್ತಿದೆ. ಪಾಕಿಸ್ತಾನ ಅಪ್ಘಾನಿಸ್ತಾನದ ವಿರುದ್ಧವಾಗಿಯೂ ಪರೋಕ್ಷ ಯುದ್ಧ ನಡೆಸುತ್ತಿದೆ. ಆದರೆ ಉಭಯ ರಾಷ್ಟ್ರಗಳ ನಡುವೆ ಸೌಹಾರ್ದಯುತ ಸಂಬಂಧ ಏರ್ಪಡುವುದಕ್ಕೆ ಸಹಕಾರಿಯಾಗುವ ನಿಟ್ಟಿನಲ್ಲಿ ಟಿ 20 ಕ್ರಿಕೆಟ್ ಸರಣಿಯನ್ನು ಆಯೋಜಿಸಲಾಗಿತ್ತು. 2017 ರ ಜುಲೈ ಅಥವಾ ಆಗಸ್ಟ್ ನಲ್ಲಿ ಕಾಬೂಲ್ ನಲ್ಲಿ ಪಾಕಿಸ್ತಾನ-ಅಫ್ಘಾನಿಸ್ತಾನ ನಡುವಿನ ಮೊದಲ ಟಿ 20 ಕ್ರಿಕೆಟ್ ಸರಣಿ ನಡೆಯಬೇಕಿತ್ತು. ಆದರೆ ಅಫ್ಘಾನಿಸ್ತಾನದ ಕಾಬೂಲ್ ನಲ್ಲಿ ಪಾಕ್ ಭಯೋತ್ಪಾದಕರು ದಾಳಿ ನಡೆಸಿದ ನಂತರ ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ಹೇಳಿಕೆ ನೀಡಿದ್ದು, ಪಾಕಿಸ್ತಾನದೊಂದಿಗಿನ ಕ್ರಿಕೆಟ್ ಪಂದ್ಯಗಳನ್ನು ರದ್ದುಗೊಳಿಸಿರುವುದಾಗಿ ತಿಳಿಸಿದೆ.