ಭಾರತ-ಪಾಕ್ ಸರಣಿ ನಡೆಯಬೇಕು, ಆದರೆ ಸರಣಿ ಕುರಿತು ಸರ್ಕಾರದ ನಿರ್ಧಾರಕ್ಕೆ ಬದ್ಧ: ಲಕ್ಷ್ಮಣ್

ಭಾರತ ಮತ್ತು ಪಾಕಿಸ್ತಾನ ವಿರುದ್ಧದ ದ್ವಿಪಕ್ಷೀಯ ಕ್ರಿಕೆಟ್ ಸರಣಿ ನಡೆಬೇಕೆಂಬುದು ನನ್ನ ಆಶಯ. ಆದರೆ ಈ ಬಗ್ಗೆ ಕೇಂದ್ರ ಸರ್ಕಾರ ತೆಗೆದುಕೊಂಡಿರುವ...
ವಿವಿಎಸ್ ಲಕ್ಷ್ಮಣ್
ವಿವಿಎಸ್ ಲಕ್ಷ್ಮಣ್
Updated on: 
ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ ವಿರುದ್ಧದ ದ್ವಿಪಕ್ಷೀಯ ಕ್ರಿಕೆಟ್ ಸರಣಿ ನಡೆಬೇಕೆಂಬುದು ನನ್ನ ಆಶಯ. ಆದರೆ ಈ ಬಗ್ಗೆ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದು ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ. 
ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಪಿ ಮತ್ತು ಜಿ ಶಿಕ್ಷಾ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಲಕ್ಷ್ಮಣ್, ಪಾಕಿಸ್ತಾನ ಎಂದು ಕ್ರಿಕೆಟ್ ಆಡಲು ಇಷ್ಟಪಡುತ್ತೇನೆ. ಪಾಕ್ ವಿರುದ್ಧದ ಪಂದ್ಯಗಳು ಎಂದರೇ ಆಸಕ್ತಿ ಇನ್ನಷ್ಟು ಹೆಚ್ಚಾಗುತ್ತದೆ. ಆದರೆ ದ್ವಿಪಕ್ಷೀಯ ಕ್ರಿಕೆಟ್ ಸರಣಿ ಕುರಿತಂತೆ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಮಾನ್ಯತೆ ನೀಡುವುದು ನಮ್ಮ ಕರ್ತವ್ಯವಾಗಿದೆ ಎಂದರು. 
ಇನ್ನು ಇಂಗ್ಲೆಂಡ್ ನಲ್ಲಿ ಜೂನ್ 1ರಂದು ಪ್ರಾರಂಭಗೊಳ್ಳಲಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾನುವಾರ ನಡೆಯುವ ಭಾರತ ಮತ್ತು ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ ಜಯ ಸಾಧಿಸುವ ನೆಚ್ಚಿನ ತಂಡ ಎನಿಸಿದೆ ಎಂದು ಲಕ್ಷ್ಣಣ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com