ನ್ಯೂಜಿಲೆಂಡ್ ವಿರುದ್ಧ ಪಂದ್ಯ ಸೋತರು ಹಲವು ದಾಖಲೆ ಬರೆದು ವಿರಾಟ್ ಕೊಹ್ಲಿ

ಟೀಂ ಇಂಡಿಯಾ ಹಾಗೂ ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಭಾರತ 40 ರನ್ ಗಳಿಂದ ಸೋತಿದ್ದು ಈ ಪಂದ್ಯದಲ್ಲಿ ತಂಡದ ನಾಯಕ ವಿರಾಟ್ ಕೊಹ್ಲಿ ಹಲವು...
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
ಟೀಂ ಇಂಡಿಯಾ ಹಾಗೂ ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಭಾರತ 40 ರನ್ ಗಳಿಂದ ಸೋತಿದ್ದು ಈ ಪಂದ್ಯದಲ್ಲಿ ತಂಡದ ನಾಯಕ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ಬರೆದಿದ್ದಾರೆ. 
ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧ ಶತಕ ಸಿಡಿಸಿದ್ದಾರೆ. 59 ಎಸೆತಗಳಲ್ಲಿ 65 ರನ್ ಸಿಡಿಸಿದ ಕೊಹ್ಲಿ ಟಿ20 ಪಂದ್ಯದಲ್ಲಿ 7 ಸಾವಿರ ರನ್ ಪೂರೈಸಿದ ಭಾರತೀಯ ಅಗ್ರ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. 
ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ಅತಿ ಹೆಚ್ಚು ರನ್ ಕಲೆಹಾಕಿದ ಬ್ಯಾಟ್ ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 2ನೇ ಸ್ಥಾನಕ್ಕೇರಿದ್ದಾರೆ. ಲಂಕಾದ ಮಾಜಿ ಕ್ರಿಕೆಟಿಗ ತಿಲಕರತ್ನೆ ದಿಲ್ಶಾನ್ ರನ್ನು ಹಿಂದಿಕ್ಕಿದರು. ದಿಲ್ಶಾನ್ 1889 ರನ್ ಗಳಿಸಿದ್ದು ಸದ್ಯ ಕೊಹ್ಲಿ ಒಟ್ಟಾರೆ 1943 ರನ್ ಸಿಡಿಸುವ ಮೂಲಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ. ನ್ಯೂಜಿಲೆಂಡ್ ಆಟಗಾರ ಬ್ರೆಂಡಮ್ ಮೆಕಲಮ್ 2140 ಸಿಡಿಸುವ ಮೂಲಕ ಅಗ್ರಸ್ಥಾನದಲ್ಲಿದ್ದಾರೆ. 
ಭರ್ಜರಿ ಬ್ಯಾಟಿಂಗ್ ಮೂಲಕ ವಿರಾಟ್ ಕೊಹ್ಲಿ ರನ್ ಹೊಳೆ ಹರಿಸುತ್ತಿದ್ದಾರೆ. ಇನ್ನು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ 200 ಬೌಂಡರಿಯನ್ನು ಕೊಹ್ಲಿ ಪೂರೈಸಿದ್ದಾರೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com