ಟೀಂ ಇಂಡಿಯಾದ ಈ ಮಾಜಿ ಕ್ರಿಕೆಟಿಗ ವಿರಾಟ್ ಕೊಹ್ಲಿರ ಲವ್ ಗುರು!

ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಪ್ರತಿ ಬಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಾಗಲೂ ಹಲವು ಕುತೂಹಲಕಾರಿ ವಿಷಯಗಳನ್ನು ಬಹಿರಂಗಗೊಳಿಸುತ್ತಾರೆ...
ಅನುಷ್ಕಾ ಶರ್ಮಾ-ವಿರಾಟ್ ಕೊಹ್ಲಿ
ಅನುಷ್ಕಾ ಶರ್ಮಾ-ವಿರಾಟ್ ಕೊಹ್ಲಿ
Updated on
ಮುಂಬೈ: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಪ್ರತಿ ಬಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಾಗಲೂ ಹಲವು ಕುತೂಹಲಕಾರಿ ವಿಷಯಗಳನ್ನು ಬಹಿರಂಗಗೊಳಿಸುತ್ತಾರೆ. 
ಅಂತೇ ಈ ಬಾರಿ ಬ್ರೇಕ್ ಫಾಸ್ಟ್ ವಿತ್ ಚಾಂಪಿಯನ್ಸ್ ಎನ್ನುವ ಟಾಕ್ ಶೋವೊಂದರಲ್ಲಿ ವಿರಾಟ್ ಕೊಹ್ಲಿ ತಮ್ಮ ಪ್ರೇಮಲೋಕದ ಲವ್ ಗುರು ಯಾರು ಎಂಬುದನ್ನು ಹೇಳಿದ್ದಾರೆ. 
ಟೀ ಇಂಡಿಯಾದ ಮಾಜಿ ವೇಗಿ ಜಹೀರ್ ಖಾನ್ ನನ್ನ ಲವ್ ಗುರು ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ. ಈ ಹಿಂದೆ ಟೀಕೆಗಳಿಗೆ ಗುರಿಯಾಗಿದ್ದಾಗ ನಾನು ಜಹೀರ್ ಖಾನ್ ಅವರೊಂದಿಗೆ ಮಾತನಾಡುವಾಗ ಅವರು ಪ್ರೀತಿ ವಿಷಯ ಮುಚ್ಚಿಡಲು ಪ್ರಯತ್ನಿಸಿದಷ್ಟು ನಿನ್ನ ಮೇಲೆ ಒತ್ತಡ ಹೆಚ್ಚಾಗುತ್ತದೆ ಎಂದು ಹೇಳಿದ್ದರು. ಜಹೀರ್ ಮಾತುಗಳು ನನಗೆ ಧೈರ್ಯ ತುಂಬಿದ್ದವು ಎಂದು ಕೊಹ್ಲಿ ಹೇಳಿಕೊಂಡಿದ್ದಾರೆ. 
ಕಳೆದ ವರ್ಷ ಇಂಗ್ಲೆಂಡ್ ಪ್ರವಾಸದ ವೇಳೆ ವಿರಾಟ್ ಕೊಹ್ಲಿ ಕಳಪೆ ಪ್ರದರ್ಶನ ನೀಡಿ ಟೀಕೆಗೆ ಗುರಿಯಾಗಿದ್ದರು. ಕೊಹ್ಲಿಗಿಂತ ಹೆಚ್ಚು ಅವರ ಪ್ರೇಯಸಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಬಗ್ಗೆ ಟೀಕೆಗಳು ವ್ಯಕ್ತವಾಗಿದ್ದವು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com