68 ರನ್ ಗಳ ಗುರಿಯನ್ನು ಬೆನ್ನತ್ತಿದ ನ್ಯೂಜಿಲೆಂಡ್ ತಂಡ ನಿಗದಿತ 8 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 61 ರನ್ ಗಳನ್ನು ಮಾತ್ರ ಗಳಿಸಲು ಶಕ್ತವಾಯಿತು. ಆ ಮೂಲಕ ಭಾರತದ ಎದುರು 6 ರನ್ ಗಳ ವಿರೋಚಿತ ಸೋಲು ಅನುಭವಿಸಿತು. ನ್ಯೂಜಿಲೆಂಡ್ ಪರ ಕೇನ್ ವಿಲಿಯಮ್ಸ್ (8 ರನ್), ಕೋಲಿನ್ ಮುನ್ರೋ (7ರನ್) ರನ್, ಗ್ಲೇನ್ ಫಿಲಿಪ್ಸ್ (11ರನ್), ಗ್ರಾಂಡ್ ಹೋಮ್ (17 ರನ್) ಉತ್ತಮ ಬ್ಯಾಟಿಂಗ್ ಮಾಡುವ ಪ್ರಯತ್ನ ಮಾಡಿದರಾದರೂ ತಂಡಕ್ಕೆ ಗೆಲುವು ತಂದು ಕೊಡುವಲ್ಲಿ ಯಶಸ್ವಿಯಾಗಲಿಲ್ಲ. ಭಾರತದ ಪರ ಜಸ್ಪ್ರೀತ್ ಬುಮ್ರಾ 2 ವಿಕೆಟ್ , ಭುವನೇಶ್ವರ್ ಕುಮಾರ್ ಮತ್ತು ಕುಲದೀಪ್ ಯಾದವ್ ತಲಾ ಒಂದು ವಿಕೆಟ್ ಪಡೆದರು.