ಜನ ತಮ್ಮ ಅನುಕೂಲಕ್ಕೆ ತಕ್ಕಂತೆ ಧೋನಿ ವಿರುದ್ಧ ಟೀಕೆ ಮಾಡುತ್ತಿದ್ದಾರೆ: ವಿರಾಟ್ ಕೊಹ್ಲಿ

ಟೀಂ ಇಂಡಿಯಾದ ಮಾಜಿ ನಾಯಕ ಧೋನಿ ಟೀಕಾಕಾರರಿಗೆ ಹಾಲಿ ಕ್ಯಾಪ್ಟನ್ ಕೊಹ್ಲಿ ತಿರುಗೇಟು ನೀಡಿದ್ದು, ಜನರು ತಮ್ಮ ಅನುಕೂಲಕ್ಕೆ ತಕ್ಕಂತೆ ಧೋನಿ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ವಿರಾಟ್ ಕೊಹ್ಲಿ -ಧೋನಿ
ವಿರಾಟ್ ಕೊಹ್ಲಿ -ಧೋನಿ
ತಿರುವನಂತಪುರಂ: ಟೀಂ ಇಂಡಿಯಾದ ಮಾಜಿ ನಾಯಕ ಧೋನಿ ಟೀಕಾಕಾರರಿಗೆ ಹಾಲಿ ಕ್ಯಾಪ್ಟನ್ ಕೊಹ್ಲಿ ತಿರುಗೇಟು ನೀಡಿದ್ದು, ಜನರು ತಮ್ಮ ಅನುಕೂಲಕ್ಕೆ ತಕ್ಕಂತೆ ಧೋನಿ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ತಮ್ಮದೂ ಸೇರಿದಂತೆ ತಂಡದ ಇತರ ಆಟಗಾರರ ವೈಫಲ್ಯವನ್ನು ನಿರ್ಲಕ್ಷಿಸಿ ಕೇವಲ ಧೋನಿಯನ್ನು ಟೀಕಿಸುತ್ತಿದ್ದಾರೆ ಎಂದು ವಿರಾಟ್ ಕೊಹ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನ್ಯೂಜಿಲ್ಯಾಂಡ್ ವಿರುದ್ಧದ 2 ನೇ ಟಿ20 ಪಂದ್ಯದಲ್ಲಿ ಭಾರತದ ಸೋಲಿಗೆ ಧೋನಿ ಹೆಚ್ಚು ಡಾಟ್ ಬಾಲ್ ಗಳನ್ನಾಡಿದ್ದೇ ಕಾರಣ ಎಂದು ತಜ್ಞರು ವಿಶ್ಲೇಷಿಸಿದ್ದಾರೆ. 
2 ನೇ ಟಿ20 ಪಂದ್ಯದ ಸೋಲಿನ ಬೆನ್ನಲ್ಲೆ ಪ್ರತಿಕ್ರಿಯೆ ನೀಡಿದ್ದ ವಿವಿಎಸ್ ಲಕ್ಷ್ಮಣ್ ಟಿ20ಯಲ್ಲಿ ಯುವಕರಿಗೆ ಅವಕಾಶ ನೀಡಬೇಕು ಎಂದಿದ್ದರೆ, ಟೀಂ ಮ್ಯಾನೇಜ್ಮೆಂಟ್, ಮಾಜಿ ನಾಯಕ ತಂಡದಲ್ಲಿ ತನ್ನ ಪಾತ್ರವನ್ನು ಅರಿಯುವಂತೆ ಮಾಡಬೇಕು ಎಂದು ವಿರೇಂದ್ರ ಸೆಹ್ವಾಗ್ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ವಿರಾಟ್ ಕೊಹ್ಲಿ, ಜನರು ಧೋನಿಯವರತ್ತ ಏಕೆ ಬೆರಳು ಮಾಡುತ್ತಿದ್ದಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ನಾನು 3 ಬಾರಿ ಬ್ಯಾಟಿಂಗ್ ವೈಫಲ್ಯ ಎದುರಿಸಿದರೂ ನನ್ನತ್ತ ಯಾರೂ ಬೆರಳು ತೋರುವುದಿಲ್ಲ, ಏಕೆಂದರೆ ನನಗಿನ್ನೂ 35 ಆಗಿಲ್ಲ ಎಂದು ವಿರಾಟ್ ವ್ಯಂಗ್ಯವಾಗಿ ಧೋನಿ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ. 
ಅವರು ಫಿಟ್ ಆಗಿದ್ದಾರೆ, ಎಲ್ಲಾ ಪರೀಕ್ಷೆಗಳನ್ನೂ ಯಶಸ್ವಿಯಾಗಿ ಪೂರೈಸಿದ್ದಾರೆ, ಆನ್ ಫೀಲ್ಡ್ ನಲ್ಲಿ ತಾಂತ್ರಿಕವಾಗಿ ತಂಡಕ್ಕೆ ಅತ್ಯುತ್ತಮ ಕೊಡುಗೆ ನೀಡುತ್ತಿದ್ದಾರೆ. ಇನ್ನು ಬ್ಯಾಟಿಂಗ್ ವಿಷಯದಲ್ಲಿ ಆಸ್ಟ್ರೇಲಿಯಾ, ಶ್ರೀಲಂಕಾ ವಿರುದ್ಧ ಅತ್ಯುತ್ತಮವಾದ ಪ್ರದರ್ಶನವನ್ನೇ ನೀಡಿದ್ದಾರೆ ಎಂದು ಕೊಹ್ಲಿ ಹೇಳಿದ್ದಾರೆ. 
’ಧೋನಿ ಬಗ್ಗೆ ಟೀಕೆ ಮಾಡಬೇಕಾದರೆ ಅವರಿಗೆ ಬ್ಯಾಟಿಂಗ್ ನಲ್ಲಿ ಎಷ್ಟು ಸಮಯವಿತ್ತು ಎಂಬುದನ್ನೂ ಗಮನಿಸಬೇಕಾಗುತ್ತದೆ, ಈ ಸರಣಿಯಲ್ಲಿ ಅವರಿಗೆ ಬ್ಯಾಟಿಂಗ್ ಗೆ ಹೆಚ್ಚು ಸಮಯ ಸಿಗಲಿಲ್ಲ, ಅಷ್ಟೇ ಅಲ್ಲದೇ ಬ್ಯಾಟಿಂಗ್ ಮಾಡಲು ಬಂದಾಗ ಅವರು ಎದುರಿಸುವ ಸ್ಥಿತಿಯನ್ನೂ ಗಮನದಲ್ಲಿಡಬೇಕಾಗುತ್ತದೆ, ಹಾರ್ದಿಕ್ ಪಾಂಡ್ಯ ಸಹ ಆ ಪಂದ್ಯದಲ್ಲಿ ಹೆಚ್ಚು ರನ್ ಗಳಿಸಲು ಸಾಧ್ಯವಾಗಲಿಲ್ಲ, ಹೀಗಿದ್ದರೂ ಧೋನಿಯತ್ತ ಮಾತ್ರ ಬೆರಳು ತೋರಿಸುವುದೇಕೆ? ಎಂದು ಕೊಹ್ಲಿ ಪ್ರಶ್ನಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com