ನಾಗ್ಪುರ: ಪ್ರವಾಸಿ ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 1 ವಿಕೆಟ್ ನಷ್ಟಕ್ಕೆ 11 ರನ್ ಗಳಿಸಿದೆ.
ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಲಂಕಾ ಪಡೆ ಟೀಂ ಇಂಡಿಯಾ ಬೌಲರ್ ಗಳ ಮಾರಕ ದಾಳಿಗೆ ತತ್ತರಿಸಿದ್ದು 205 ರನ್ ಗಳಿಗೆ ಆಲೌಟ್ ಆಯಿತು. ನಂತರ ಇನ್ನಿಂಗ್ಸ್ ಆರಂಭಿಸಿದ ಭಾರತ ಮೊದಲ ದಿನದಾಟದಂತ್ಯಕ್ಕೆ 1 ವಿಕೆಟ್ ನಷ್ಟಕ್ಕೆ 11 ರನ್ ಪೇರಿಸಿದೆ.
ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದ ಕೆಎಲ್ ರಾಹುಲ್ 7 ರನ್ ಗಳಿಸಿ ಔಟಾದರು. ಮುರಳಿ ವಿಜಯ್ ಅಜೇಯ 2 ಮತ್ತು ಚೇತೇಶ್ವರ ಪೂಜಾರ ಅಜೇಯ 2 ರನ್ ಗಳಿಸಿ ಎರಡನೇ ದಿನದಾಟವನ್ನು ಆರಂಭಿಸಲಿದ್ದಾರೆ.
ಲಂಕಾ ಪರ ಕರುಣರತ್ನೆ 51, ಚಾಂಡಿಮಲ್ 57, ಡಿಕ್ಲೆಲ್ಲಾ 24 ಹಾಗೂ ಪೆರೆರಾ 15 ರನ್ ಗಳಿಸಿ ಔಟಾಗಿದ್ದಾರೆ.
ಭಾರತ ಪರ ಆರ್ ಅಶ್ವಿನ್ 4, ಇಶಾಂತ್ ಶರ್ಮಾ ಮತ್ತು ರವೀಂದ್ರ ಜಡೇಜಾ ತಲಾ 3 ವಿಕೆಟ್ ಪಡೆದಿದ್ದಾರೆ.