ಮುರಳಿ ವಿಜಯ್
ಕ್ರಿಕೆಟ್
ನಾಗ್ಪುರ ಟೆಸ್ಟ್: ಲಂಕಾ ವಿರುದ್ಧ ಮುರಳಿ ವಿಜಯ್ ಶತಕ, ಸುಸ್ಥಿತಿಯತ್ತ ಭಾರತ
ಪ್ರವಾಸಿ ಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಮುರಳಿ ವಿಜಯ್ ಶತಕ ಬಾರಿಸಿದ್ದು ಇದು ಅವರ ಟೆಸ್ಟ್ ಕ್ರಿಕೆಟ್ ನಲ್ಲಿ...
ನಾಗ್ಪುರ: ಪ್ರವಾಸಿ ಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಮುರಳಿ ವಿಜಯ್ ಶತಕ ಬಾರಿಸಿದ್ದು ಇದು ಅವರ ಟೆಸ್ಟ್ ಕ್ರಿಕೆಟ್ ನಲ್ಲಿ 10ನೇ ಶತಕವಾಗಿದೆ.
ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಮುರಳಿ ವಿಜಯ್ 106 ರನ್ ಗಳಿಸಿ ಆಡುತ್ತಿದ್ದಾರೆ. ವಿಜಯ್ ಗೆ ಸಾಥ್ ನೀಡಿರುವ ಚೇತೇಶ್ವರ ಪೂಜಾರ ಅಜೇಯ 71 ರನ್ ಗಳಿಸಿದ್ದು ತಂಡ ಸುಸ್ಥಿತಿಯಲ್ಲಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 205 ರನ್ ಅಲ್ಪ ಮೊತ್ತಕ್ಕೆ ಆಲೌಟ್ ಆಯಿತು. ನಂತರ ಇನ್ನಿಂಗ್ಸ್ ಪ್ರಾರಂಭಿಸಿದ ಟೀಂ ಇಂಡಿಯಾಗೆ ಆರಂಭಿಕ ಆಘಾತ ಎದುರಾಯಿತು. 7 ರನ್ ಗಳಿಸಿದ್ದಾಗ ಕೆಎಲ್ ರಾಹುಲ್ ಔಟ್ ಆಗಿ ಪೆವಿಲಿಯನ್ ಸೇರಿದರು. ನಂತರ ಜತೆಯಾದ ಮುರಳಿ ವಿಜಯ್ ಮತ್ತು ಚೇತೇಶ್ವರ ಪೂಜಾರ 181 ರನ್ ಗಳ ಜತೆಯಾಟ ನೀಡಿದ್ದಾರೆ. ಸದ್ಯ ಟೀಂ ಇಂಡಿಯಾ 68 ಓವರ್ ಮುಕ್ತಾಯಕ್ಕೆ 1 ವಿಕೆಟ್ ನಷ್ಟಕ್ಕೆ 189 ರನ್ ಪೇರಿಸಿದೆ.
ಲಂಕಾ ಪರ ಕರುಣರತ್ನೆ 51, ಚಾಂಡಿಮಲ್ 57, ಡಿಕ್ಲೆಲ್ಲಾ 24 ಹಾಗೂ ಪೆರೆರಾ 15 ರನ್ ಗಳಿಸಿ ಔಟಾಗಿದ್ದಾರೆ.
ಭಾರತ ಪರ ಆರ್ ಅಶ್ವಿನ್ 4, ಇಶಾಂತ್ ಶರ್ಮಾ ಮತ್ತು ರವೀಂದ್ರ ಜಡೇಜಾ ತಲಾ 3 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ