ನಾಗ್ಪುರ: ಪ್ರವಾಸಿ ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ 6 ವಿಕೆಟ್ ನಷ್ಟಕ್ಕೆ 610 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿದೆ.
ನಾಗ್ಪುರದ ವಿದರ್ಭ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 610 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡಿದ್ದು 405 ರನ್ ಮುನ್ನಡೆ ಸಾಧಿಸಿತ್ತು. ನಂತರ ಎರಡನೇ ಇನ್ನಿಂಗ್ಸ್ ಪ್ರಾರಂಭಿಸಿದ ಶ್ರೀಲಂಕಾಗೆ ಆರಂಭಿಕ ಆಘಾತ ಎದುರಾಗಿದ್ದು ಎರಡನೇ ಎಸತದಲ್ಲೇ ಸಮರವಿಕ್ರಮಾ ಡಕ್ ಔಟ್ ಆಗಿ ಪೆವಿಲಿಯನ್ ಸೇರಿದರು. ಇನ್ನು ಮೂರನೇ ದಿನದ ಅಂತ್ಯಕ್ಕೆ ಲಂಕಾ 1 ವಿಕೆಟ್ ನಷ್ಟಕ್ಕೆ 21 ರನ್ ಗಳಿಸಿದ್ದು ಕರುಣರತ್ನೆ ಅಜೇಯ 11 ಹಾಗೂ ತಿರಿಮನ್ನೆ 9 ರನ್ ಗಳಿಸಿ ನಾಲ್ಕನೇ ದಿನದಾಟವನ್ನು ಪ್ರಾರಂಭಿಸಲಿದ್ದಾರೆ.
ಭಾರತ ಪರ ಕೆಎಲ್ ರಾಹುಲ್ 7, ಮುರಳಿ ವಿಜಯ್ 128, ಚೇತೇಶ್ವರ ಪೂಜಾರ 143, ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ 213 ಹಾಗೂ ರೋಹಿತ್ ಶರ್ಮಾ ಅಜೇಯ 102 ರನ್ ಗಳಿಸಿದ್ದಾರೆ. ಲಂಕಾ ಪರ ಬೌಲಿಂಗ್ ನಲ್ಲಿ ಪೆರೆರಾ 3, ಘಮಗೆ, ಹೆರಾತ್, ಶನಕ ತಲಾ 1 ವಿಕೆಟ್ ಪಡೆದಿದ್ದಾರೆ.
ಲಂಕಾ ಪರ ಲಂಕಾ ಪರ ಕರುಣರತ್ನೆ 51, ಚಾಂಡಿಮಲ್ 57, ಡಿಕ್ಲೆಲ್ಲಾ 24 ಹಾಗೂ ಪೆರೆರಾ 15 ರನ್ ಗಳಿಸಿ ಔಟಾಗಿದ್ದಾರೆ. ಭಾರತ ಪರ ಆರ್ ಅಶ್ವಿನ್ 4, ಇಶಾಂತ್ ಶರ್ಮಾ ಮತ್ತು ರವೀಂದ್ರ ಜಡೇಜಾ ತಲಾ 3 ವಿಕೆಟ್ ಪಡೆದಿದ್ದಾರೆ.