ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಆಯ್ಕೆ

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತ ಆಟಗಾರರ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ...
ಟೀಂ ಇಂಡಿಯಾ
ಟೀಂ ಇಂಡಿಯಾ
Updated on: 
ಮುಂಬೈ: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತ ಆಟಗಾರರ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ. 
ಮೂರು ಟಿ20 ಪಂದ್ಯಗಳ ಸರಣಿಗೆ ಟೀಂ ಇಂಡಿಯಾ ತಂಡ ಪ್ರಕಟವಾಗಿದ್ದು ತಂಡದಲ್ಲಿ ವೇಗಿ ಆಶಿಶ್ ನೆಹ್ರಾ ಮತ್ತು ದಿನೇಶ್ ಕಾರ್ತಿಕ್ ಸ್ಥಾನಪಡೆದಿದ್ದು ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಅಜಿಂಕ್ಯ ರಹಾನೆಯನ್ನು ಕೈಬಿಡಲಾಗಿದೆ. ಇನ್ನು ಪತ್ನಿಯ ಅನಾರೋಗ್ಯದಿಂದ ಏಕದಿನ ಸರಣಿಯಿಂದ ಹೊರಗುಳಿದಿದ್ದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ತಂಡಕ್ಕೆ ಮರಳಿದ್ದಾರೆ. 
ಟೀಂ ಇಂಡಿಯಾ ಟಿ20 ತಂಡ
ವಿರಾಟ್ ಕೊಹ್ಲಿ(ನಾಯಕ), ಶಿಖರ್ ಧವನ್, ರೋಹಿತ್ ಶರ್ಮಾ, ಕೆಎಲ್ ರಾಹುಲ್, ಎಂಎಸ್ ಧೋನಿ(ವಿಕೆಟ್ ಕೀಪರ್), ಮನೀಶ್ ಪಾಂಡ್ಯೆ, ಕೇದಾರ್ ಜಾದವ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯಾ, ಕುಲ್ದೀಪ್ ಯಾದವ್, ಯಜುವೇಂದರ್ ಚಹಾಲ್, ಜಸ್ಪ್ರೀತ್ ಬೂಮ್ರಾ, ಭುವನೇಶ್ವರ್ ಕುಮಾರ್, ಆಶಿಶ್ ನೆಹ್ರಾ ಮತ್ತು ಅಕ್ಷರ್ ಪಟೇಲ್. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com