ನವದೆಹಲಿ: ಟೀಂ ಇಂಡಿಯಾದ ಕೋಚ್ ರವಿಶಾಸ್ತ್ರಿಗೆ ಮೊದಲ 3 ತಿಂಗಳ ಅವಧಿಗೆ 1.20 ಕೋಟಿ ರುಪಾಯಿ ಸಂಭಾವನೆ ರೂಪದಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ನೀಡಿದೆ.
ಜುಲೈನಲ್ಲಿ ರವಿಶಾಸ್ತ್ರಿ ಅವರು ಟೀಂ ಇಂಡಿಯಾದ ಕೋಚ್ ಆಗಿ ಆಯ್ಕೆಯಾಗಿದ್ದರು. ಜುಲೈ 18 ರಿಂದ ಆಕ್ಟೋಬರ್ 18ರ ಅವಧಿಯ ಸಂಭಾವನೆಯ ಹಣವನ್ನು ನೀಡಲಾಗಿದೆ ಎಂದು ಬಿಸಿಸಿಐ ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.
ಇನ್ನು ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿಗೆ ಅಂತಾರಾಷ್ಟ್ರೀಯ ಟೂರ್ನಿಗಳಲ್ಲಿ ಆಡಿದ ಸಂಭಾವನೆ ಹಣವಾದ 57.88 ಲಕ್ಷ ರುಪಾಯಿಗಳನ್ನು ನೀಡಲಾಗಿದೆ.