ಕ್ರಿಕೆಟ್‌ಗೆ ವಿದಾಯ ಹೇಳಿದ ಆಸೀಸ್ ವೇಗಿ ಜಾನ್ ಹೇಸ್ಟಿಂಗ್ಸ್

ಗಾಯದ ಮೇಲೆ ಬರೆ ಎಳೆದಂತೆ ಬ್ಯಾಕ್ ಟು ಬ್ಯಾಕ್ ಗಾಯದ ಸಮಸ್ಯೆಗೆ ತುತ್ತಾಗುತ್ತಿರುವ ಆಸ್ಟ್ರೇಲಿಯಾ ವೇಗಿ ಜಾನ್ ಹೇಸ್ಟಿಂಗ್ಸ್ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ...
ಜಾನ್ ಹೇಸ್ಟಿಂಗ್ಸ್
ಜಾನ್ ಹೇಸ್ಟಿಂಗ್ಸ್
Updated on
ಮೆಲ್ಬೋರ್ನ್: ಗಾಯದ ಮೇಲೆ ಬರೆ ಎಳೆದಂತೆ ಬ್ಯಾಕ್ ಟು ಬ್ಯಾಕ್ ಗಾಯದ ಸಮಸ್ಯೆಗೆ ತುತ್ತಾಗುತ್ತಿರುವ ಆಸ್ಟ್ರೇಲಿಯಾ ವೇಗಿ ಜಾನ್ ಹೇಸ್ಟಿಂಗ್ಸ್ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. 
2010ರಲ್ಲಿ ಏಕದಿನ ಕ್ರಿಕೆಟ್ ಬದುಕಿಗೆ ಪಾದಾರ್ಪಣೆ ಮಾಡಿದ್ದ ಜಾನ್ ಹೇಸ್ಟಿಂಗ್ಸ್ ಒಂದಿಲ್ಲೊಂದು ಗಾಯದ ಸಮಸ್ಯೆಗೆ ತುತ್ತಾಗುತ್ತಿದ್ದರು. ಈ ಹಿನ್ನಲೆಯಲ್ಲಿ ಏಕದಿನ ಮತ್ತು ಫಸ್ಟ್ ಕ್ಲಾಸ್ ಕ್ರಿಕೆಟ್ ಬದುಕಿಗೆ ವಿದಾಯ ಘೋಷಿಸಿದ್ದು ಟಿ20 ಕ್ರಿಕೆಟ್ ನಲ್ಲಿ ಆಡಲಿದ್ದಾರೆ. 
ಜಾನ್ ಹೇಸ್ಟಿಂಗ್ಸ್ 2012ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕೇವಲ ಒಂದು ಟೆಸ್ಟ್ ಪಂದ್ಯವನ್ನು ಆಡಿದ್ದು 1 ವಿಕೆಟ್ ಮಾತ್ರ ಪಡೆದಿದ್ದರು. ಇನ್ನು 29 ಏಕದಿನ ಪಂದ್ಯಗಳನ್ನು ಆಡಿರುವ ಅವರು 42 ವಿಕೆಟ್ ಗಳನ್ನು ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com