ಗುವಾಹಟಿ: ಆಸ್ಟ್ರೇಲಿಯಾ ಹಾಗೂ ಟೀಂ ಇಂಡಿಯಾ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದು ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಗುವಾಹಟಿಯ ಬರ್ಸಪಾರ ಕ್ರೀಡಾಂಗಣದಲ್ಲಿ ಇದು ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯವಾಗಿದೆ. ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ಮೊದಲ ಪಂದ್ಯ ಗೆದ್ದಿದ್ದು ಸರಣಿ ಉಳಿಸಿಕೊಳ್ಳಲು ಆಸ್ಟ್ರೇಲಿಯಾಗೆ ಈ ಪಂದ್ಯವನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದೆ.
ಬಲಿಷ್ಠ ಬ್ಯಾಟಿಂಗ್ ಲೈನ್ ಅಪ್ ಹೊಂದಿದ್ದರು ಆಸ್ಟ್ರೇಲಿಯಾ ಆಟಗಾರರು ಅಲ್ಪಮೊತ್ತಕ್ಕೆ ಔಟಾಗುತ್ತಿರುವುದು ತಂಡಕ್ಕೆ ದೊಡ್ಡ ಹೊಡೆತ ನೀಡಿದೆ.