ಮಹಿಳಾ ಕ್ರಿಕೆಟ್ ನಲ್ಲಿ ಆಸಕ್ತಿ ಮೂಡಿಸಲು ಪಂದ್ಯಗಳ ನೇರ ಪ್ರಸಾರ ಮಾಡಬೇಕು: ಮಿಥಾಲಿ ರಾಜ್

2017ರ ಐಸಿಸಿ ಮಹಿಳಾ ವಿಶ್ವಕಪ್ ನಂತರ ಮಹಿಳಾ ಕ್ರಿಕೆಟ್ ಬಗ್ಗೆ ಜನರಲ್ಲಿ ಆಸಕ್ತಿ ಹೆಚ್ಚಾಗಿದೆ ಎಂದು ....
ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್
ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್
Updated on
ನವದೆಹಲಿ: 2017ರ ಐಸಿಸಿ ಮಹಿಳಾ ವಿಶ್ವಕಪ್ ನಂತರ ಮಹಿಳಾ ಕ್ರಿಕೆಟ್ ಬಗ್ಗೆ ಜನರಲ್ಲಿ ಆಸಕ್ತಿ ಹೆಚ್ಚಾಗಿದೆ ಎಂದು ಹೇಳಿದ ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್, ಮಹಿಳಾ ಕ್ರಿಕೆಟ್ ಪಂದ್ಯಗಳನ್ನು ಹೆಚ್ಚು ಹೆಚ್ಚು ಟಿವಿಗಳಲ್ಲಿ ಪ್ರಸಾರ ಮಾಡಬೇಕೆಂದು ಅಭಿಪ್ರಾಯಪಟ್ಟಿದ್ದಾರೆ.
ಎಎನ್ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ಮಹಿಳಾ ಕ್ರಿಕೆಟ್ ಪಂದ್ಯಗಳು ಜನತೆಗೆ ಹೆಚ್ಚೆಚ್ಚು ಕಾಣಿಸಬೇಕು. ಮಹಿಳಾ ಕ್ರಿಕೆಟ್ ಬಗ್ಗೆ ಜನತೆಯಲ್ಲಿ ಇನ್ನಷ್ಟು ಆಸಕ್ತಿ ಮೂಡಿಸಲು ಟಿವಿಗಳಲ್ಲಿ ಹೆಚ್ಚು ಪ್ರಸಾರವಾಗುತ್ತಿರಬೇಕು ಎಂದರು.
ಭಾರತೀಯ ಮಹಿಳಾ ಕ್ರಿಕೆಟ್ ತಂಡ ಇನ್ನಷ್ಟು ಶ್ರಮಪಟ್ಟು ಆಡಬೇಕಿದೆ. ಅದು ಟ್ವಂಟಿ-20ಯಾಗಿರಬಹುದು, ಏಕದಿನ ಅಂತಾರಾಷ್ಟ್ರೀಯ ಪಂದ್ಯವಾಗಿರಬಹುದು ಅಥವಾ ಟೆಸ್ಟ್ ಪಂದ್ಯವಾಗಿರಬಹುದು. ವಿಶ್ವಕಪ್ ನಂತರ ನಮ್ಮ ಪ್ರದರ್ಶನ ಮುಂದುವರಿಯಬೇಕಿದೆ. ಕ್ರಿಕೆಟ್ ಮಂಡಳಿ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಈ ನಿಟ್ಟಿನಲ್ಲಿ ಗಮನ ಹರಿಸುತ್ತಿದೆ ಎಂದು ಮಿಥಾಲಿ ಹೇಳಿದರು.
ಈ ವರ್ಷದ ಐಸಿಸಿ ಮಹಿಳಾ ವಿಶ್ವಕಪ್ ಇಂಗ್ಲೆಂಡ್ ನಲ್ಲಿ ನಡೆದಿದ್ದು, ಭಾರತ ಮತ್ತು ಇಂಗ್ಲೆಂಡ್ ನಡುವಣ ಪಂದ್ಯವನ್ನು ಸುಮಾರು 180 ದಶಲಕ್ಷ ಜನರು ಟಿವಿಯಲ್ಲಿ ನೇರ ಪ್ರಸಾರವನ್ನು ವೀಕ್ಷಿಸಿ ದಾಖಲೆಯಾಗಿತ್ತು. ಕಳೆದ 2013ರಲ್ಲಿ ನಡೆದ ಐಸಿಸಿ ಮಹಿಳಾ ವಿಶ್ವಕಪ್ ಗಿಂತ ಈ ಸಾರಿ ಪ್ರೇಕ್ಷಕರ ಸಂಖ್ಯೆ ಶೇಕಡಾ 300ರಷ್ಟು ಹೆಚ್ಚಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com