ಕುಲ್‌ದೀಪ್, ಚಾಹಲ್ ಪ್ರತಿಭಾವಂತರನ್ನು ಎದುರಿಸಲು ಎದುರು ನೋಡುತ್ತಿದ್ದೇವೆ: ಕೇನ್ ವಿಲಿಯಮ್ಸನ್

ಭಾರತ ಪ್ರವಾಸದಲ್ಲಿರುವ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಟೀಂ ಇಂಡಿಯಾದ ಪ್ರತಿಭಾವಂತ ಬೌಲರ್ ಗಳಾದ ಕುಲ್‌ದೀಪ್ ಯಾದವ್ ಮತ್ತು...
ಕೇನ್ ವಿಲಿಯಮ್ಸನ್
ಕೇನ್ ವಿಲಿಯಮ್ಸನ್
Updated on: 
ಮುಂಬೈ: ಭಾರತ ಪ್ರವಾಸದಲ್ಲಿರುವ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಟೀಂ ಇಂಡಿಯಾದ ಪ್ರತಿಭಾವಂತ ಬೌಲರ್ ಗಳಾದ ಕುಲ್‌ದೀಪ್ ಯಾದವ್ ಮತ್ತು ಯಜುವೆಂದ್ರ ಚಹಾಲ್ ರನ್ನು ಎದುರಿಸಲು ಎದುರು ನೋಡುತ್ತಿದ್ದೇವೆ ಎಂದು ಹೇಳಿದ್ದಾರೆ. 
ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿ ತಂಡದ ಗೆಲುವಿನಲ್ಲಿ ಕುಲ್‌ದೀಪ್ ಮತ್ತು ಚಹಾಲ್ ಪ್ರಮುಖ ಪಾತ್ರವಹಿಸಿದ್ದರು. ಇನ್ನು ಕುಲ್‌ದೀಪ್ ಹ್ಯಾಟ್ರಿಕ್ ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಇಂತಹ ಬೌಲರ್ ಗಳ ಎದುರು ತುಂಬಾ ಎಚ್ಚರಿಕೆಯಿಂದ ಆಡಬೇಕು ಎಂದರು. 
ಇದೇ ವೇಳೆ ಟೀಂ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಸಹ ಅದ್ಭುತ ಪ್ರದರ್ಶನ ನೀಡಿದ್ದು ಬ್ಯಾಟಿಂಗ್ ಜತೆಗೆ ಬೌಲಿಂಗ್ ನಲ್ಲೂ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಇನ್ನು ನಾಯಕ ವಿರಾಟ್ ಕೊಹ್ಲಿ ನಂಬಿಕೆಯನ್ನು ಪಾಂಡ್ಯ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು. 
ಅಕ್ಟೋಬರ್ 22ರಿಂದ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾದ ಏಕದಿನ ಮತ್ತು ಟಿ20 ಸರಣಿ ಆಡಲಿದೆ. ಅದಕ್ಕಾಗಿ ಈಗಾಗಲೇ ವಿಲಿಯಮ್ಸನ್ ನೇತೃತ್ವದ ನ್ಯೂಜಿಲೆಂಡ್ ತಂಡ ಭಾರತಕ್ಕೆ ಆಗಮಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com