ನವದೆಹಲಿ: ಡಿಸೆಂಬರ್ ನಲ್ಲಿ ಬಾಲಿವುಡ್ ನಟಿ ಅನುಷ್ಕಾ ಜತೆ ಮದುವೆಯಾಗಲಿದ್ದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರು ಲಂಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ಕೆ ಪ್ರದಾಸ್ ಅವರು ಕೊಹ್ಲಿ ಮೂರು ಟೆಸ್ಟ್ ಪಂದ್ಯಗಳಲ್ಲೂ ಆಡಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.