ಕೇಸರಿ ಶಾಲು ಹೊದಿಸಿ ನ್ಯೂಜಿಲೆಂಡ್-ಭಾರತ ಆಟಗಾರರಿಗೆ ಸ್ವಾಗತ

ಟೀಂ ಇಂಡಿಯಾ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಕಾನ್ಪುರದಲ್ಲಿ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಕಾನ್ಪುರಕ್ಕೆ ಆಗಮಿಸಿದ ಉಭಯ ತಂಡಗಳ ಆಟಗಾರರಿಗೆ
ನ್ಯೂಜಿಲೆಂಡ್ ತಂಡದ ಆಟಗಾರರು
ನ್ಯೂಜಿಲೆಂಡ್ ತಂಡದ ಆಟಗಾರರು
ಕಾನ್ಪುರ್: ಟೀಂ ಇಂಡಿಯಾ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಕಾನ್ಪುರದಲ್ಲಿ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಕಾನ್ಪುರಕ್ಕೆ ಆಗಮಿಸಿದ ಉಭಯ ತಂಡದ ಆಟಗಾರರಿಗೆ ಕೇಸರಿ ಶಾಲು ಹೊದಿಸಿ ಸ್ವಾಗತಿಸಲಾಯಿತು.
ಕಾನ್ಪುರದ ಗ್ರೀನ್ ಪಾರ್ಕ್ ಕ್ರೀಡಾಂಗಣದಲ್ಲಿ ಮೂರನೇ ಹಾಗೂ ಸರಣಿ ನಿರ್ಣಾಯಕ ಭಾನುವಾರ ಪಂದ್ಯ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಕಾನ್ಪುರಕ್ಕೆ ಆಗಮಿಸಿದರು. ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿದ್ದು ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿಗಳಾಗಿ ಆಯ್ಕೆಯಾದ ನಂತರ ಉತ್ತರಪ್ರದೇಶದಲ್ಲಿ ಕೇಸರಿಗೆ ಭಾರೀ ಬೇಡಿಕೆ ಬಂದಿದೆ. 
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೇಸರಿ ಉಡುಪನ್ನು ಧರಿಸುವುದರಿಂದ ಕಾನ್ಪುರಕ್ಕೆ ಆಡಲು ಬಂದ ಟೀಂ ಇಂಡಿಯಾ ಹಾಗೂ ನ್ಯೂಜಿಲೆಂಡ್ ಆಟಗಾರರನ್ನು ಕೇಸರಿ ಶಾಲು ಹೊದಿಸಿ ಸ್ವಾಗತಿಸಲಾಯಿತು. 
ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಉಭಯ ತಂಡಗಳು 1-1 ಪಂದ್ಯಗಳನ್ನು ಗೆಲ್ಲುವ ಮೂಲಕ ಸಮಬಲ ಸಾಧಿಸಿದೆ. ಇನ್ನು ಕಾನ್ಪುರದಲ್ಲಿ ಸರಣಿ ನಿರ್ಣಾಯಕ ಪಂದ್ಯ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಹೆಚ್ಚಿನ ಮಹತ್ವ ಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com