ಕಾನ್ಪುರ: ಟೀಂ ಇಂಡಿಯಾ ಹಾಗೂ ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ 337 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿದೆ.
ಉತ್ತರಪ್ರದೇಶದ ಕಾನ್ಪುರದ ಗ್ರೀನ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಹಾಗೂ ನಾಯಕ ವಿರಾಟ್ ಕೊಹ್ಲಿ ಅವರ ಭರ್ಜರಿ ಶತಕ ಟೀಂ ಇಂಡಿಯಾ 6 ವಿಕೆಟ್ ನಷ್ಟಕ್ಕೆ 337 ರನ್ ಪೇರಿಸಿದ್ದು ನ್ಯೂಜಿಲೆಂಡ್ ಗೆ ಗೆಲ್ಲಲು 338 ರನ್ ಗುರಿ ನೀಡಿದೆ.
ಟೀಂ ಇಂಡಿಯಾ ಪರ ಶಿಖರ್ ಧವನ್ 14, ರೋಹಿತ್ ಶರ್ಮಾ 147, ವಿರಾಟ್ ಕೊಹ್ಲಿ 113, ಹಾರ್ದಿಕ್ ಪಾಂಡ್ಯ 8, ಎಂಎಸ್ ಧೋನಿ 25 ರನ್ ಗಳಿಸಿದ್ದಾರೆ.
ನ್ಯೂಜಿಲೆಂಡ್ ಪರ ಟೀಮ್ ಸೌಥಿ ಮತ್ತು ಸ್ಯಾಂಟ್ನರ್ ಮಿಲ್ನೆ ತಲಾ 2 ವಿಕೆಟ್ ಪಡೆದಿದ್ದಾರೆ.