ಐಸಿಸಿ ಏಕದಿನ ರ್ಯಾಂಕಿಂಗ್: ಮತ್ತೆ ಅಗ್ರಸ್ಥಾನಕ್ಕೇರಿದ ಮಿಥಾಲಿ ರಾಜ್

ಟೀಂ ಇಂಡಿಯಾ ಮಹಿಳಾ ತಂಡದ ನಾಯಕ ಮಿಥಾಲಿ ರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ನೂತನವಾಗಿ ಬಿಡುಗಡೆ ಮಾಡಿರುವ ಏಕದಿನ ಬ್ಯಾಟಿಂಗ್...
ಮಿಥಾಲಿ ರಾಜ್
ಮಿಥಾಲಿ ರಾಜ್
Updated on: 
ದುಬೈ: ಟೀಂ ಇಂಡಿಯಾ ಮಹಿಳಾ ತಂಡದ ನಾಯಕ ಮಿಥಾಲಿ ರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ನೂತನವಾಗಿ ಬಿಡುಗಡೆ ಮಾಡಿರುವ ಏಕದಿನ ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ಮತ್ತೇ ಅಗ್ರಸ್ಥಾನಕ್ಕೇರಿದ್ದಾರೆ. 
ಆಸ್ಟ್ರೇಲಿಯಾ ಮೆಗ್ ಲ್ಯಾನ್ನಿಂಗ್ ಗಾಯದ ಸಮಸ್ಯೆಯಿಂದಾಗಿ ಇತ್ತೀಚೆಗೆ ನಡೆದ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ದೂರ ಉಳಿದಿದ್ದರು. ಈ ಹಿನ್ನೆಲೆಯಲ್ಲಿ ಲ್ಯಾನ್ನಿಂಗ್ ಅಗ್ರಸ್ಥಾನದಿಂದ ನಾಲ್ಕನೇ ಸ್ಥಾನಕ್ಕೇ ಕುಸಿದಿದ್ದಾರೆ. ಎರಡನೇ ಸ್ಥಾನದಲ್ಲಿದ್ದ ಮಿಥಾಲಿ ರಾಜ್ ಅಗ್ರಸ್ಥಾನಕ್ಕೇರಿದ್ದಾರೆ. 
ಇನ್ನು ಅಂಕಪಟ್ಟಿಯಲ್ಲಿ ಆಸ್ಟ್ರೇಲಿಯಾ ಎಲ್ಲೈಸ್ ಪೆರ್ರಿ ಎರಡನೇ ಸ್ಥಾನ ಹಾಗೂ ನ್ಯೂಜಿಲೆಂಡ್ ಆಟಗಾರ್ತಿ ಆ್ಯಮಿ ಸಟ್ಟರ್ವೈಟ್ ಮೂರನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾ ಆಟಗಾರ್ತಿ ಅಲಿಸ್ಸಾ ಹೀಲಿ ಇತ್ತೀಚೆಗಷ್ಟೇ ಪಂದ್ಯವೊಂದರಲ್ಲಿ 145 ರನ್ ಸಿಡಿಸಿದ್ದರು. ಹೀಗಾಗಿ 44ನೇ ಸ್ಥಾನದಿಂದ 28ನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com